ಮತದಾರರ ಪಟ್ಟಿ ಪರಿಷ್ಕರಣೆಗೆ ಬಿಜೆಪಿ ಸಕ್ರಿಯ ಸಹಕಾರ: ಸಂದೀಪ ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಆ.1: ನಗರದಲ್ಲಿ ದೋಷರಹಿತ ಹಾಗೂ ಪಾರದರ್ಶಕ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಚುನಾವಣಾ ಆಯೋಗದ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಗೆ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಸಂದೀಪ ಪಾಟೀಲ ಹೇಳಿದರು.ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ನಗರದಲ್ಲಿ ಒಟ್ಟು 2,90,479 ಮತದಾರರಿದ್ದು, ಈ ಪೈಕಿ 2,04,368 ಮತದಾರರ ಮಾಹಿತಿಯನ್ನು ಡಿಜಿಟೈಸೇಶನ್ ಮಾಡಲಾಗಿದೆ. ಇದುವರೆಗೆ ಶೇ.70.35ರಷ್ಟು ಕಾರ್ಯ…

Read More

ಬೇರುಮಟ್ಟದ ಸಮೀಕ್ಷೆ ಮೂಲಕ ಕಾಂಗ್ರೆಸ್ ಪುನರ್‌ಸಂಘಟನೆ: ಸಚಿನ್ ಯಾದವ್

ಜಿಲ್ಲಾಧ್ಯಕ್ಷ ಹಾಗೂ ಜಿಲ್ಲಾ ಸಮಿತಿ ಪುನರ್‌ರಚನೆಗೆ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ; ಸಮಗ್ರ ವರದಿ ಎಐಸಿಸಿಗೆ ಸಪ್ತಸಾಗರ ವಾರ್ತೆ,ವಿಜಯಪುರ, ಆ.1: ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಂಘಟನೆಯನ್ನು ಬೇರುಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಕಾರ್ಯಕರ್ತರ ಸಲಹೆ, ಸಮಾಲೋಚನೆ ಹಾಗೂ ಅಭಿಪ್ರಾಯ ಸಂಗ್ರಹಿಸಿ ಸಮಗ್ರ ಕಾರ್ಯಯೋಜನೆ ರೂಪಿಸಲಾಗುತ್ತಿದೆ ಎಂದು ಮಧ್ಯಪ್ರದೇಶದ ಶಾಸಕ ಹಾಗೂ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಂಘಟನೆಗೆ ಎಐಸಿಸಿ ನೇಮಿಸಿರುವ ಉಸ್ತುವಾರಿ ಸಚಿನ್ ಯಾದವ್ ತಿಳಿಸಿದರು.ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಂಘಟನೆಗೆ…

Read More

ಬಸವೇಶ್ವರರ ಜನ್ಮಭೂಮಿ ಇಂಗಳೇಶ್ವರ ಅಭಿವೃದ್ಧಿಗೆ ಆಗ್ರಹ

ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರ್ಪಡೆ, ಸರ್ಕಾರಿ ಕಾಲೇಜು–ಆರೋಗ್ಯ ಕೇಂದ್ರ ಸ್ಥಾಪನೆಗೆ ಒತ್ತಾಯ; ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹ ಎಚ್ಚರಿಕೆ ಸಪ್ತಸಾಗರ ವಾರ್ತೆ,ವಿಜಯಪುರ, ಆ.1: ಜಗಜ್ಯೋತಿ ಬಸವೇಶ್ವರರ ಜನ್ಮಭೂಮಿ ಇಂಗಳೇಶ್ವರ ಗ್ರಾಮ ಇಂದಿಗೂ ಮೂಲಸೌಕರ್ಯಗಳಿಂದ ವಂಚಿತವಾಗಿದ್ದು, ಗ್ರಾಮವನ್ನು ತಕ್ಷಣವೇ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಸೇರಿಸಿ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ತಿಂಗಳಿನಿಂದ ಗ್ರಾಮಸ್ಥರು ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ ಎಂದು ಗ್ರಾಮದ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡ ಅರವಿಂದ…

Read More

ವಿಶ್ವ ಶ್ರೇಷ್ಠ ಸಾಹಿತ್ಯದ ಅನರ್ಘ್ಯ ಪ್ರತಿಭೆ ಮಧುರಚೆನ್ನರು: ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಜು. 31: ಹಳ್ಳಿಯೊಂದರಲ್ಲಿ ಹುಟ್ಟಿ, ಸರಳ ಬದುಕಿನಲ್ಲೇ ಕನ್ನಡ ಸಾಹಿತ್ಯಕ್ಕೆ ಅಪೂರ್ವ ಕೊಡುಗೆ ನೀಡಿದ ಮಧುರಚೆನ್ನರು ವಿಶ್ವ ಶ್ರೇಷ್ಠ ಸಾಹಿತ್ಯವನ್ನು ರಚಿಸಿದ ಅನರ್ಘ್ಯ ಪ್ರತಿಭೆ ಎಂದು ಶಿಕ್ಷಕ-ಸಾಹಿತಿ ಸಂತೋಷ ಬಂಡೆ ಹೇಳಿದರು.ತಾಲೂಕಿನ ಹಿರೇರೂಗಿ ಗ್ರಾಮದ ಅರಿವು ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಮಧುರಚೆನ್ನರ 123ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಹಲಸಂಗಿ ಗೆಳೆಯರ ಬಳಗವನ್ನು ಕಟ್ಟಿಕೊಂಡು, ಗ್ರಾಮೀಣ ಮಹಿಳೆಯರು ಹಾಡುತ್ತಿದ್ದ ಜಾನಪದ ಗೀತೆಗಳನ್ನು ಸಂಗ್ರಹಿಸಿ ಪ್ರಕಟಿಸುವ ಮೂಲಕ ಮಧುರಚೆನ್ನರು ಕನ್ನಡ ಜಾನಪದ ಸಾಹಿತ್ಯಕ್ಕೆ ಅಮೂಲ್ಯ ಸೇವೆ…

Read More

ಸಾಮಾಜಿಕ ಭದ್ರತಾ ಪಿಂಚಣಿಗೆ ₹30 ಸಾವಿರ ಆದಾಯ ಮಿತಿ ಹಿಂಪಡೆಯಿರಿ: ಅಪ್ಪುರಾಜ್ ನಿಮಾದಾರ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ,ಜು. 31:ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ₹30 ಸಾವಿರ ವಾರ್ಷಿಕ ಆದಾಯ ಮಿತಿ ನಿಗದಿಪಡಿಸಿರುವ ಕ್ರಮವನ್ನು ಹಿಂಪಡೆದು, ಅದನ್ನು ಕನಿಷ್ಠ ₹35 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ(ರಿ) ರಾಜ್ಯಾಧ್ಯಕ್ಷ ಅಪ್ಪುರಾಜ್ ನಿಮಾದಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಂಧ್ಯಾ ಸುರಕ್ಷಾ ಯೋಜನೆ, ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಪಿಂಚಣಿ, ನಿರ್ಗತಿಕ ವಿಧವಾ ವೇತನ, ಅಂಗವಿಕಲರ ಪಿಂಚಣಿ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಿಗೆ ನಿಗದಿಪಡಿಸಿರುವ…

Read More

ವಿಜಯಪುರ ವಿಮಾನ ನಿಲ್ದಾಣಕ್ಕೆ ಚುರುಕು: ಕೇಂದ್ರ ಸಚಿವರೊಂದಿಗೆ ಜಿಗಜಿಣಗಿ ಮಹತ್ವದ ಚರ್ಚೆ

ಸಪ್ತಸಾಗರ ವಾರ್ತೆ,ನವದೆಹಲಿ/ವಿಜಯಪುರ, ಜು. 31:ವಿಜಯಪುರ ವಿಮಾನ ನಿಲ್ದಾಣದ ಕಾರ್ಯಾರಂಭಕ್ಕೆ ಉಳಿದಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಂಸದ ರಮೇಶ ಜಿಗಜಿಣಗಿ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿಯಾಗಿ ಮಹತ್ವದ ಸಮಾಲೋಚನೆ ನಡೆಸಿದರು.ಸಂಸತ್ ಅಧಿವೇಶನದ ವೇಳೆ ನಡೆದ ಈ ಭೇಟಿಯಲ್ಲಿ, ವಿಜಯಪುರ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಅನುಮತಿ ಹಾಗೂ ಪರಿಸರ ಸಂಬಂಧಿತ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ಜಿಗಜಿಣಗಿ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ…

Read More

ಪುನರ್ವಸತಿ ವಿಳಂಬ ಬೇಡ; ಮೂಲಸೌಕರ್ಯ ಕಲ್ಪಿಸಿ ಕಾಮಗಾರಿ ತ್ವರಿತಗೊಳಿಸಿ

ಖಾಜಾ ನಗರ–ಟಿಪ್ಪು ನಗರದ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಡಳಿತಕ್ಕೆ ದಲಿತ ಸ್ವರಾಜ್ಯ ಸೇನೆ ಆಗ್ರಹ ಸಪ್ತಸಾಗರ ವಾರ್ತೆ,ವಿಜಯಪುರ, ಜು.31:ನಗರದ ಖಾಜಾ ನಗರ ಹಾಗೂ ಟಿಪ್ಪು ನಗರದ ಕೊಳಚೆ ಪ್ರದೇಶದ ನಿವಾಸಿಗಳ ಪುನರ್ವಸತಿ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸಿ, ಮಂಜೂರಾಗಿರುವ ಜಾಗದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕೂಡಲೇ ಕಲ್ಪಿಸುವಂತೆ ದಲಿತ ಸ್ವರಾಜ್ಯ ಸೇನೆ–ಕರ್ನಾಟಕ ಸಂಘಟನೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.ಬುರಣಾಪುರ ಗ್ರಾಮದ ಸರ್ವೇ ನಂ.67/1ರಲ್ಲಿ ಪುನರ್ವಸತಿಗಾಗಿ 5 ಎಕರೆ ಜಮೀನು ಮಂಜೂರು ಮಾಡಿರುವ ಸರ್ಕಾರ ಹಾಗೂ ಜಿಲ್ಲಾಡಳಿತದ ಕ್ರಮವನ್ನು ಸಂಘಟನೆ ಸ್ವಾಗತಿಸಿದ್ದು, ಜಮೀನು ಮಂಜೂರಿನಲ್ಲೇ…

Read More

ಮಾನವ ಕಳ್ಳಸಾಗಾಣಿಕೆ ತಡೆಗೆ ಜನಜಾಗೃತಿ ಅತ್ಯಗತ್ಯ: ನ್ಯಾಯಾಧೀಶ ಅರವಿಂದ ಹಾಗರಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಜುಲೈ 31:ಮಾನವ ಕಳ್ಳಸಾಗಾಣಿಕೆ ಎಂಬುದು ಸಮಾಜದ ಭದ್ರತೆ ಹಾಗೂ ಮಾನವ ಹಕ್ಕುಗಳಿಗೆ ಗಂಭೀರ ಸವಾಲಾಗಿದ್ದು, ಕೇವಲ ಒಂದು ದಿನ ಆಚರಿಸುವುದಕ್ಕಿಂತ ಸಾರ್ವಜನಿಕರಲ್ಲಿ ನಿರಂತರ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಎಸ್. ಹಾಗರಗಿ ಹೇಳಿದರು.ನಗರದ ರಾಘವೇಂದ್ರ ಕಾಲೋನಿಯ ರುಡ್‌ಸೆಟ್ ಸಂಸ್ಥೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತವಾಗಿ…

Read More

ಉಕ್ಕಲಿಯಲ್ಲಿ ಬಿಎಲ್‌ಡಿಇ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ

ಗ್ರಾಮೀಣರಿಗೆ ತಜ್ಞ ವೈದ್ಯರ ಸೇವೆ ಡಿಜಿಟಲ್ ಮೂಲಕ ಮನೆಬಾಗಿಲಿಗೆ ಸಪ್ತಸಾಗರ ವಾರ್ತೆ,ವಿಜಯಪುರ, ಜು. 31:ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಡಿಜಿಟಲ್ ತಂತ್ರಜ್ಞಾನದ ಮೂಲಕ ತಲುಪಿಸುವ ಮಹತ್ವಾಕಾಂಕ್ಷಿ ಹೆಜ್ಜೆಯಾಗಿ, ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯವು ಉಕ್ಕಲಿ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದಲ್ಲಿ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ ನೀಡಿದೆ.ಕಾರ್ಯಕ್ರಮವನ್ನು ನವದೆಹಲಿಯ ಸೆಂಟರ್ ಫಾರ್ ಕ್ರಾನಿಕ್ ಡಿಸೀಸ್ ಕಂಟ್ರೋಲ್ (CCDC) ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ. ಡಿ. ಪ್ರಭಾಕರನ್ ಉದ್ಘಾಟಿಸಿ ಮಾತನಾಡಿ, ದೂರದ ಹಾಗೂ ಹಿಂದುಳಿದ ಪ್ರದೇಶಗಳ ಜನರಿಗೆ ಸಮಾನ ಮತ್ತು…

Read More

ಆಗಸ್ಟ್ 5ರಿಂದ 20ರವರೆಗೆ 10 ಕೋಟಿ ಜನರಿಂದ ವ್ಯಸನಮುಕ್ತ ಪ್ರತಿಜ್ಞೆ ಅಭಿಯಾನ: ರಾಜಯೋಗಿನಿ ಬಿ.ಕೆ. ಸರೋಜಾ

ಸಪ್ತಸಾಗರ ವಾರ್ತೆ,ವಿಜಯಪುರ, ಜು.30:ಮಾದಕ ವ್ಯಸನವು ವ್ಯಕ್ತಿಯ ಜೀವನವಷ್ಟೇ ಅಲ್ಲ, ಕುಟುಂಬ ಮತ್ತು ಸಮಾಜದ ಭವಿಷ್ಯವನ್ನೂ ಹಾಳು ಮಾಡುವ ಗಂಭೀರ ಸಾಮಾಜಿಕ ಪಿಡುಗಾಗಿದ್ದು, ಪ್ರತಿಯೊಬ್ಬರೂ ವ್ಯಸನಮುಕ್ತ ಜೀವನಕ್ಕೆ ಸಂಕಲ್ಪ ಮಾಡಬೇಕು ಎಂದು ವಿಜಯಪುರ ಬ್ರಹ್ಮಕುಮಾರಿ ಸೇವಾಕೇಂದ್ರದ ಸಂಚಾಲಕಿ ರಾಜಯೋಗಿನಿ ಬಿ.ಕೆ. ಸರೋಜಾ ಕರೆ ನೀಡಿದರು.ತಿಕೋಟಾ ತಾಲ್ಲೂಕಿನ ಲೋಹಗಾಂವ ಗ್ರಾಮದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಆಶ್ರಮದಲ್ಲಿ ಗುರುಪೂರ್ಣಿಮೆ ಹಾಗೂ ವ್ಯಸನಮುಕ್ತ ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಲೋಹಗಾಂವ ಹಿರೇಮಠದ ಅಲ್ಲಮಪ್ರಭು ಮಹಾರಾಜರು ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿ, ಇಂದಿನ…

Read More