ಸಂಕ್ರಾಂತಿ: ವಿಜಯಪುರ-ಬೆಂಗಳೂರು ಮಧ್ಯೆ ವಿಶೇಷ ರೈಲು

ಸಪ್ತಸಾಗರ ವಾರ್ತೆ, ವಿಜಯಪುರ, ಜ. 2: ವಿಜಯಪುರ ಜಿಲ್ಲೆಯ ಪ್ರಯಾಣಿಕರ ಅನುಕೂಲಕ್ಕಾಗಿ ವಿಜಯಪುರ-ಬೆಂಗಳೂರಿಗೆ ಸಕ್ರಾಂತಿ ಹಬ್ಬದ ಸಂದರ್ಭದಲ್ಲಿ ವಿಶೇಷ ರೈಲು ಸೇವೆ ಒದಗಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಈ ರೈಲು ಸಂಚಾರ ಆರಂಭಿಸಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರದಿಂದ ಬೆಂಗಳೂರು ಪ್ರಯಾಣ ಬೆಳೆಸುವವರ ಸಂಖ್ಯೆ ಅಧಿಕ, ಸಂಕ್ರಾಂತಿ ಸೇರಿದಂತೆ ಬರುವ ಹಬ್ಬಗಳಿಗೆ ಅನೇಕರು ಪ್ರಯಾಣ ಮಾಡಬೇಕಾಗುತ್ತದೆ. ಹೀಗಾಗಿ ಈ ಜನತೆಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ವಿಶೇಷ ರೈಲು ಸೇವೆ ಆರಂಭಿಸಲು…

Read More

ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸಿ-ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 2: ಬಾಲಮಂದಿರದ ಆವರಣದಲ್ಲಿ ಕೈತೋಟ ಅಭಿವೃದ್ಧಿಪಡಿಸಬೇಕು ಹಾಗೂ ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು ಯೋಜನಾಬದ್ಧವಾಗಿ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಹೇಳಿದರು.ಜಿಲ್ಲಾಡಳಿತ,ಎಂ.ಬಿ.ಪಾಟೀಲ ಫೌಂಡೇಷನ್,ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಜ. 1 ರಂದು ನಗರದ ಸರ್ಕಾರಿ ಬಾಲಕರ ಬಾಲಮಂದಿರ ವಿಜಯಪುರದಲ್ಲಿ ಹೊಸ ವರ್ಷಾಚರಣೆಯನ್ನು ಮಕ್ಕಳೊಂದಿಗೆ ಆಚರಿಸಿ ಅವರು ಮಾತನಾಡಿದರು.ಮಕ್ಕಳು ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮಕ್ಕಳಿಗಾಗಿ…

Read More

ಸರ್ಕಾರಿ ವೈದ್ಯಕೀಯ ಕಾಲೇಜ್ ಘೋಷಣೆ ವಿಳಂಬ: ಹೋರಾಟಗಾರರಿಂದ ಸಚಿವ ಎಂ. ಬಿ. ಪಾಟೀಲರ ಮನೆಗೆ ಮುತ್ತಿಗೆ ಯತ್ನ

ಸಪ್ತಸಾಗರ ವಾರ್ತೆ ವಿಜಯಪುರ, ಜ. 1:ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್ ಘೋಷಣೆಗೆ ಸರ್ಕಾರದ ವಿಳಂಬ ಧೋರಣೆ ಖಂಡಿಸಿ ಹೋರಾಟಗಾರರು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲರ ಮನೆಗೆ ಮುತ್ತಿಗೆ ಹಾಕಲು ಗುರುವಾರ ವಿಫಲ ಯತ್ನ ನಡೆಸಿದರು.ಹೋರಾಟಗಾರರು ಸಚಿವ ಎಂ.ಬಿ. ಪಾಟೀಲ ಅವರ ಮನೆಗೆ ಮುತ್ತಿಗೆ ಹಾಕಲು ತೆರಳುತ್ತಿದ್ದಾಗ ಮಧ್ಯದಲ್ಲಿಯೇ ಪೊಲೀಸರು ಅವರನ್ನು ತಡೆದು ಬಂಧಿಸಿದರು.ಇದರಿಂದ ಆಕ್ರೋಶಗೊಂಡ ಹೋರಾಟಗಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು. ಸರ್ಕಾರ ಹೋರಾಟಗಾರರನ್ನು ಪೊಲೀಸರ ಮುಖಾಂತರ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಪ್ರತಿಭಟನೆಕಾರರು ಆರೋಪಿಸಿದರು.ಸಚಿವರು…

Read More

ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಲು ಕ್ರೀಡಾಂಗಣಗಳಲ್ಲಿ ಅಗತ್ಯ ಸೌಲಭ್ಯ ಒದಗಿಸಿ-ಜಿಲ್ಲಾಧಿಕಾರಿ ಡಾ.ಆನಂದ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.1: ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ-ರಾಷ್ಟ್ರ- ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈಯ್ಯಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಕ್ರೀಡಾಂಗಣ ಹಾಗೂ ನಗರದ ಕನಕದಾಸ ಬಡಾವಣೆಯಲ್ಲಿರುವ ಒಳಾಂಗಣ ಕ್ರೀಡಾಂಗಣಗಳಲ್ಲಿ ಎಲ್ಲ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಗುರುವಾರ ನಗರದ ಜಿಲ್ಲಾ ಕ್ರೀಡಾಂಗಣದ ಕಚೇರಿಯಲ್ಲಿ ಜರುಗಿದ ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆಗೈಯಲು…

Read More

ಅಪಾಯಕರ ಮನರಂಜನೆ ಕ್ರೀಡೆಗಳಿಗೆ ಕಡಿವಾಣ ಹಾಕಲು ಡಿಸಿಗೆ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 1:ಅಪಾಯಕಾರಿ ಮನರಂಜನೆ ಆಟಗಳಿಗೆ ನಗರದ ಶ್ರೀ ಸಿದ್ದೇಶ್ವರ ಜಾತ್ರೆಯಲ್ಲಿ ಪರವಾನಗಿ ನೀಡದಂತೆ ಭೀಮ್ ಸರ್ಕಾರ ಸಂಘಟನೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಗುರುವಾರ ಮನವಿ ಮಾಡಿಕೊಂಡಿದೆ.ನಗರದ ಕಳೆದ ವರ್ಷದಲ್ಲಿ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಅನಧಿಕೃತ ಅಪಾಯಕರ ಕಾನೂನು ಬಾಹಿರ ಮನೋರಂಜನಾ ಆಟಗಳಿಗೆ ಪರವಾನಿಗೆ ನೀಡಿದ್ದಿರಿ. ಆ ಪ್ರಯುಕ್ತ ಉಲ್ಲೇಖ (೨) ರ ಪ್ರಕಾರ ನಮ್ಮ ಸಂಘಟನೆ ಪರವಾಗಿ ನ್ಯಾಯಾಲಯದ ಮೆಟ್ಟಲೇರಿದ್ದ ತಮಗೂ ತಿಳಿದ ವಿಷಯ. ಅದರಂತೆ ಈ ಮನೋರಂಜನಾ ಆಟಗಳಿಗೆ ಸಂಬಂಧಪಟ್ಟ…

Read More

ನಾಡಗೀತೆ ಕರ್ನಾಟಕದ ಶ್ರೇಷ್ಠತೆ ಗೌರವದ ಸಂಕೇತ – ಎನ್.ಎಂ.ಬಿರಾದಾರ ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ, ಜ.1: ಕುವೆಂಪು ರಚಿಸಿದ ಕನ್ನಡದ ನಾಡಗೀತೆ ಕನ್ನಡಿಗರ, ಕನ್ನಡ ಸಾಹಿತ್ಯದ ಶ್ರೀಮಂತ ಸಂಸ್ಕೃತಿ ಕರ್ನಾಟಕದ ಸ್ವಾಭಿಮಾನ ಮತ್ತು ಘನತೆ, ಇತಿಹಾಸ, ಭೂಗೋಳ ವೈವಿಧ್ಯತೆಯನ್ನು ಸಾರುವ ನಮ್ಮೆಲ್ಲರ ಹೆಮ್ಮೆಯ ನಾಡಗೀತೆ ಜಯ ಭಾರತ ಜನನಿಯ ತನುಜಾತೆಗೆ ನೂರು ವರುಷಗಳು ಸಂದಿದ್ದು ಕನ್ನಡಿಗರಿಗೆ ಸ್ವಾಭಿಮಾನದ ಸಂಕೇತ ಎಂದು ಚಾಣಕ್ಯ ಕರಿಯರ್ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷ ಎನ್.ಎಂ. ಬಿರಾದಾರ ಅಭಿಪ್ರಾಯಪಟ್ಟರು.ಬುಧವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಿಟ್ಟಿನಹಳ್ಳಿ ಪಿ.ಕೆ.ಪಿ.ಎಸ್ ಸಹಯೋಗದಲ್ಲಿ…

Read More

ಯಾರೊಂದಿಗೂ ಹೋಲಿಸಿಕೊಳ್ಳದೇ ಬದುಕಿದರೆ ಸಂತೋಷ ಪ್ರಾಪ್ತಿ :ಶಿವಯೋಗೀಶ್ವರ ಶ್ರೀ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 1: ಹುಟ್ಟಿದಾಗ ಯಾವ ವ್ಯಕ್ತಿಯೂ ಸಹ ದಡ್ಡನಾಗಿರುವುದಿಲ್ಲ. ಬದಲಿಗೆ ನಮ್ಮನ್ನು ಇನೊಬ್ಬರೊಂದಿಗೆ ಹೋಲಿಸಿಕೊಂಡು ದಡ್ಡ ಎಂದುಕೊಳ್ಳುತ್ತೇವೆ. ಅದರ ಬದಲಿಗೆ ಪ್ರತಿಯೊಬ್ಬ ವಿದ್ಯಾರ್ಥಿಯೂ ನಾನು ಬುದ್ದಿವಂತ ನನ್ನಿಂದ ಎಲ್ಲವೂ ಸಾಧ್ಯ ಎಂದುಕೊಂಡು ಪ್ರತಿದಿನವನ್ನು ಪ್ರಾರಂಭಿಸಿದರೆ ಯಶಸ್ಸು ಎನ್ನುವುದು ಹುಡುಕಿಕೊಂಡು ಬರುತ್ತದೆ ಎಂದು ಕಾಖಂಡಕಿಯ ಗುರುದೇವಾಶ್ರಮದ ಪ.ಪೂ ಶ್ರೀ ಶಿವಯೋಗೀಶ್ವರ ಸ್ವಾಮೀಜಿ ಹೇಳಿದರು.ನಗರದ ಎಕ್ಸಲಂಟ್ ಪ. ಪೂ ವಿಜ್ಞಾನ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರಿಗೆ ಗುರು ನಮನ ಮಹೋತ್ಸವದ ದಿವ್ಯ ಸಾನ್ನಿಧ್ಯ…

Read More

ನಾಗಠಾಣ: ಆದರ್ಶ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜ. 1: ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದಶಮಾನೋತ್ಸವ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಆದರ್ಶ ವಿದ್ಯಾರ್ಥಿ-ವಿದ್ಯಾರ್ಥಿನಿಯಾಗಿ ಆಯ್ಕೆಯಾದ ಶಾಲೆಯ 10 ನೇ ವರ್ಗದ ಕು. ಸಂದೀಪ ಹುಣಶ್ಯಾಳ ಮತ್ತು ಕು. ಸಾನಿಕಾ ಖನಿಮಣಿ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಗೂಳಪ್ಪ ಪೂಜಾರಿ, ಶರಣಬಸು ಪೂಜಾರಿ, ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರಶೇಖರ ಅರಕೇರಿ, ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾರದಾ ಗಿರಿಸಾಗರ,…

Read More

ಇಂದಿರಾಗಾಂಧಿ ಮುಕ್ತ ವಿ.ವಿ. ಕೋರ್ಸ್ ಗಳಿಗೆ ಪ್ರವೇಶ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 1 : ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (ಇಗ್ನೋ ) ದಿಂದ ಪ್ರಸಕ್ತ ಸಾಲಿನ ಪದವಿ ಸ್ನಾತಕೋತ್ತರ ಮತ್ತು ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶ ಆರಂಭವಾಗಿದ್ದು ಜನೆವರಿ 31 ಕೊನೆಯ ದಿನವಾಗಿದೆ. ಪ್ರವೇಶಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ನಗರದ ರಾಮಮಂದಿರ ರಸ್ತೆಯ ಬಿ.ಎಲ್. ಡಿ.ಇ.ಸಂಸ್ಥೆಯ ಜೆ.ಎಸ್.ಎಸ್.ಶಿಕ್ಷಣ ಮಹಾವಿದ್ಯಾಲಯ ಆವರಣದಲ್ಲಿರುವ ಇಗ್ನೋ ಅಧ್ಯಯನ ಕೇಂದ್ರ 1307 ರಲ್ಲಿ ಸಂಪರ್ಕಿಸಬಹುದು, ಅಲ್ಲದೆ www.ignouadmission.samarth.edu.in ಕ್ಕೆ ಲಾಗಿನ್ ಆಗಿ ಆನ್ಲೈನ್ ಮೂಲಕ ನೊಂದಣಿ ಪಡೆಯಬಹುದಾಗಿದೆ ಹೆಚ್ಚಿನ…

Read More

ಅಮರಶಿಲ್ಪಿ ಜಕಣಾಚಾರಿ ಶಿಲ್ಪಕಲೆಗೆ ನೀಡಿದ ಕೊಡುಗೆ ಅಪಾರ -ಡಾ.ಔದ್ರಾಮ್

ಸಪ್ತಸಾಗರ ವಾರ್ತೆ, ವಿಜಯಪುರ, ಜ.1: ಅಮರ ಶಿಲ್ಪಿ ಜಕಣಚಾರಿ ಅವರ ಶ್ರದ್ಧೆ ಹಾಗೂ ಅವರು ಕಲೆಗೆ ನೀಡಿದ ಕೊಡುಗೆ ಅಪಾರ ಎಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಗುರುವಾರ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಶಿಲ್ಪಕಲೆಯ ಇತಿಹಾಸದಲ್ಲಿ ಅಜರಾಮರಾಗಿರುವ ಅಮರಶಿಲ್ಪಿ ಜಕಣಾಚಾರಿ ಅವರು ಕಲ್ಲಿನಲ್ಲಿ ಜೀವ ತುಂಬಿದ ಮಹಾನ್…

Read More