ವಿವಿಧ ಕೋರ್ಸುಗಳ ಪ್ರವೇಶಾತಿ : ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ,ಫೆ.9 :2025–26ನೇ ಶೈಕ್ಷಣಿಕ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಯದ ವಿವಿಧ ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿಎಸ್ಸಿ , ಬಿ ಎಸ್ ಡಬ್ಲ್ಯೂ, ಬಿಎಲ್‌ಐಎಸ್‌ಸಿ, ಎಂಎಲ್‌ಐಎಸ್‌ಸಿ,ಎಂ ಎಸ್ಸಿ,ಎಂಎ, ಎಂಕಾಂ, ಎಂಬಿಎ, ಎಂಎಸ್ಸಿ, ಎಂಸಿಎ, ಎಂಎಸ್‌ಡಬ್ಲ್ಯೂ ಸೇರಿದಂತೆ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದು.ಆಸಕ್ತರು, ಈ ವೆಬ್‌ಸೈಟ್‌ನಲ್ಲಿ www.ksoumysuru.ac.in ಆನ್‌ಲೈನ್‌ ಅರ್ಜಿ ಸಲ್ಲಿಸಬಹುದಾಗಿದ್ದು,ಈ ಬಗ್ಗೆಹೆಚ್ಚಿನ ಮಾಹಿತಿಗಾಗಿ ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ…

Read More

ನೆಲಕ್ಕೆ ಅಪ್ಪಳಿಸಿದ ಜೆಟ್ ವಿಮಾನ: ಇಬ್ಬರಿಗೆ ಗಂಭೀರ ಗಾಯ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 8: ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದ ಬಳಿ ಜೆಟ್ ವಿಮಾನವೊಂದು ಜಮೀನಿನಲ್ಲಿ ಬಿದ್ದು ಪತನಗೊಂಡಿದೆ.ಕಲಬುರ್ಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಜೆಟ್ ವಿಮಾನದಲ್ಲಿದ್ದತೈಲ ಖಾಲಿಯಾದ ಕಾರಣ ಜೆಟ್ ವಿಮಾನ ನೆಲಕ್ಕೆ ಅಪ್ಪಳಿಸಿದೆ.ಭಾನುವಾರ ಸಂಜೆ ಜೆಟ್ ವಿಮಾನ ಜಮೀನಲ್ಲಿ ಬಿದ್ದಿದೆ. ಇದುಸೆಸ್ನಾ 172 ಟ್ಯಾಂಗೋ ಚಾರ್ಲಿ ಲಘು ವಿಮಾನವಾಗಿದ್ದು,ರೆಡ್ ಬರ್ಡ್ ಎವಿಯೇಷನ್ ಎಂಬ ವಿಮಾನ ತರಬೇತಿ ಸಂಸ್ಥೆ ಉಪಯೋಗಿಸುತ್ತಿದ್ದ ಜೆಟ್ ಪೈಲಟ್ಕ್ಯಾಪ್ಟನ್ ಕುನಾಲ್ ಮಲ್ಹೋತ್ತಾ ಹಾಗೂ ತರಬೇತಿ ನಿರತ ಪೈಲಟ್ ಗೌತಮ್ ಶಂಕರ್ ಪಿ….

Read More

ಮನೆಗೊಂದು ಗ್ರಂಥಾಲಯ ಜಾಗೃತ ಸಮಿತಿ ಸದಸ್ಯರಾಗಿ ಸಾಹಿತಿ ಮುರುಗೇಶ ಸಂಗಮ ನೇಮಕ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 8 :ರಾಜ್ಯ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರˌ ಬೆಂಗಳೂರುˌ ಪುಸ್ತಕ ಸಂಸ್ಕೃತಿಯನ್ನು ಉಳಿಸಿˌ ಬೆಳೆಸುವ ನಿಟ್ಟಿನಲ್ಲಿ ಮನೆಗೊಂದು ಗ್ರಂಥಾಲಯ ಜಾಗೃತ ಸಮಿತಿ ರಚನೆ ಮಾಡಿದ್ದು ˌ ನಗರದ ಸಾಹಿತಿˌ ಜಿಲ್ಲಾ ಕೇಂದ್ರ ಗ್ರಂಥಾಲಯದ ಗ್ರಂಥಾಲಯ ಸಹಾಯಕ ಮುರುಗೇಶ ಸಂಗಮ ಅವರನ್ನು ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದಅಧ್ಯಕ್ಷ ಡಾ. ಮಾನಸ ಅವರು ತಿಳಿಸಿದ್ದಾರೆ.ಈ ಯೋಜನೆಯು ಓದುವ ಸಂಸ್ಕೃತಿಯನ್ನು ಉಳಿಸಲು ಲೇಖಕರು ಮತ್ತು ಪ್ರಕಾಶಕರಿಗೆ ಬೆಂಬಲ ನೀಡಲು ಹಾಗೂ…

Read More

ವಚನ ಸಾಹಿತ್ಯ ನಮ್ಮೆಲ್ಲರ ಬದುಕಿಗೆ ದಾರಿದೀಪ – ವಿ.ಬಿ. ಮರ್ತೂರ ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ,ಫೆ. 8: ವಚನ ಸಾಹಿತ್ಯ ಕನ್ನಡ ಸಾರಸ್ವತ ಲೋಕಕ್ಕೆ ಅತ್ಯಮೂಲ್ಯ ಕೊಡುಗೆ ನೀಡಿದೆ. ಬಸವಣ್ಣನವರ ಸಮಕಾಲೀನ ವಚನಕಾರರು ಈ ಸಮಾಜಕ್ಕೆ ಬಹುದೊಡ್ಡ ಸಂದೇಶ ನೀಡಿ ಹೋಗಿದ್ದು, ವಚನ ಸಾಹಿತ್ಯ ನಮ್ಮೆಲ್ಲರ ಬದುಕಿಗೆ ದಾರಿದೀಪವಾಗಿದೆ. ವಚನ ಸಾಹಿತ್ಯ ಸರ್ವಕಾಲಿಕ ಅನನ್ಯ. ವಚನ ಸಾಹಿತ್ಯ ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಬಸವನಬಾಗೇವಾಡಿ ತಾಲೂಕಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿ.ಬಿ. ಮರ್ತೂರ ಅಭಿಪ್ರಾಯಪಟ್ಟರು.ರವಿವಾರ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ಲಿಂ.ಪೂಜ್ಯ…

Read More

ಮಹಾನಗರ ಪಾಲಿಕೆಯ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ ವಿಜಯಪುರ, ಫೆ.8:ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಶನಿವಾರ ಸಂಜೆ ಮಹಾನಗರ ಪಾಲಿಕೆಯ ವ್ಯಾಪ್ತಿಯ ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳನ್ನು ಪರಿಶಿಲನೆ ನಡೆಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.ವಿಜಯಪುರ ನಗರದ ನವಬಾಗ ಪ್ರದೇಶದ ಮುಖ್ಯ ರಸ್ತೆಯನ್ನು ನಿರ್ಮಿತಿ ಕೇಂದ್ರದಿಂದ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸಿ.ಸಿ ರಸ್ತೆಯ ಕಾಮಗಾರಿ ಪರಿಶಿಲನೆ ನಡೆಸಿದರು. ಇದರೊಂದಿಗೆ ನವಬಾಗ ಪ್ರದೇಶದಲ್ಲಿ ಈ ಹಿಂದೆ ಅತಿವೃಷ್ಟಿಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿ ಜನಜೀವನ ಹಾಗೂ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದ್ದರಿಂದ…

Read More

ಜಿ ಎಸ್ ಎಸ್ ಕನ್ನಡ ಕಾವ್ಯಲೋಕದ ಸಮನ್ವಯ ಕವಿ- ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ,ಫೆ. 7: ರಾಷ್ಟ್ರಕವಿ ಜಿ ಎಸ್ ಶಿವರುದ್ರಪ್ಪನವರು ಕನ್ನಡ ಕಾವ್ಯ ಲೋಕದ ಸಮನ್ವಯ ಕವಿ. ಅವರ ಕಾವ್ಯ ರಚನೆಯಲ್ಲಿ ಶಿಸ್ತು, ಶ್ರದ್ಧೆ, ಆದರ್ಶ, ಇತರರಿಗೆ ಸ್ಫೂರ್ತಿಯ ಅಂಶಗಳನ್ನು ಕಾಣುತ್ತೇವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಶನಿವಾರ ತಾಲೂಕಿನ ನಾಗಠಾಣ ಗ್ರಾಮದ ಅರಿವು ಕೇಂದ್ರದಲ್ಲಿ ಹಮ್ಮಿಕೊಂಡ ರಾಷ್ಟ್ರಕವಿ ಜಿ ಎಸ್ ಶಿವರುದ್ರಪ್ಪನವರ ಜನ್ಮ ಶತಾಬ್ದಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ನವೋದಯ ಕಾವ್ಯದ ರಮ್ಯತೆ ಮತ್ತು ನವ್ಯ ಕಾವ್ಯದ ಬೌದ್ಧಿಕತೆಗಳೆರಡನ್ನೂ ಸೇರಿಸಿ, ಕಾವ್ಯದಲ್ಲಿ ಸಮನ್ವಯತೆ…

Read More

ಎ.2ರಂದು “ನಾನು ಕರುಣಾಕರ” ಚಲನಚಿತ್ರ ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 7: ಮಕ್ಕಳು ನೋಡಬೇಕಾದ ಹಾಗೂ ಮಗನ ಆಸೆ ಪೂರೈಸಲು ತಂದೆ ಯಾವ ರೀತಿ ಪ್ರಯತ್ನಿಸುತ್ತಾನೆ ಎಂಬ ಕಥಾ ಹಂದರವುಳ್ಳ ಸದಭಿರುಚಿಯ `ನಾನು ಕರುಣಾಕರ’ ಎಂಬ ಚಲನಚಿತ್ರ ಫೋಸ್ಟ್ ಪ್ರೊಡೆಕ್ಷನ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಎಪ್ರಿಲ್ 2 ರಂದು ಬಿಡುಗಡೆಗೊಳ್ಳಲಿದೆ ಎಂದು ಚಲನಚಿತ್ರದ ನಿರ್ಮಾಪಕ ನಮನ್ ನಾರಾಯಣ ಸಂತೋಷ್ ಹೇಳಿದರು.ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳ ಸಿನೆಮಾಗಳು ಇತ್ತೀಚಿಗೆ ಬರುತ್ತಿಲ್ಲ ಎಂಬ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಈ ಹೊಸ ಪ್ರಯತ್ನಕ್ಕೆ ಕೈ ಹಾಕಲಾಗಿದೆ, ಮಧ್ಯಮ…

Read More

ಬೀದಿ ನಾಯಿಗಳ ನಿಯಂತ್ರಣಕ್ಕೆ ಎಸ್. ಯು.ಸಿ.ಐ ನಿಯೋಗ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 6: ನಗರದಲ್ಲಿ ಕಣ್ಣು ನೊಣ ಹಾಗೂ ಬೀದಿ ನಾಯಿಗಳ ನಿಯಂತ್ರಣಕ್ಕೆ ಒತ್ತಾಯಿಸಿ ಮಹಾನಗರ ಪಾಲಿಕೆ ಆಯುಕ್ತರಿಗೆ ಎಸ್ ಯು ಸಿ ಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿಯಿಂದ ಶುಕ್ರವಾರ ಮನವಿ ಪತ್ರ ಸಲ್ಲಿಸಲಾಯಿತು.ಪಾಲಿಕೆ ಅಭಿವೃದ್ಧಿ ವಿಭಾಗದ ಉಪ ಆಯುಕ್ತರು ಮನವಿ ಸ್ವೀಕರಿಸಿ, ಈಗಾಗಲೇ ಬೀದಿ ನಾಯಿಗಳಿಗೆ ಸಂತಾನೋತ್ಪತ್ತಿ ಹರಣ ಶಸ್ತ್ರ ಚಿಕಿತ್ಸೆ ಸುಮಾರು ೮೦೦೦ ನಾಯಿಗಳಿಗೆ ಏಜೆನ್ಸಿ ಮೂಲಕ ಮಾಡಿಸಲಾಗಿದೆ. ಇನ್ನುಳಿದ ನಾಯಿಗಳಿಗೆ ಈ ತಿಂಗಳ ಒಳಗಾಗಿ ಟೆಂಡರ್ ಕರೆದು ಶಸ್ತ್ರ…

Read More

ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಡಾ. ಸಂಬಣ್ಣಿಗೆ ವಿಡಿಎ ಅಧ್ಯಕ್ಷ ಸ್ಥಾನಕ್ಕೆ ನೇಮಕ: ಎಂಎಲ್ ಸಿ ಸುನೀಲಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 6: ಕಳೆದ 27 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಮತ್ತು ಎಲ್ಲ ಹಂತದ ಚುನಾವಣೆಗಳಲ್ಲಿ ಸಕ್ರಿಯವಾಗಿ ಭಾಗಿ ಆಗಿರುವ ಡಾ. ಗಂಗಾಧರ ಸಂಬಣ್ಣಿ ಅವರ ಸೇವೆಯನ್ನು ಗುರುತಿಸಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಬಿ.ಪಾಟೀಲ ಹೇಳಿದರು.ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿಡಿಎ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಡಾ.ಗಂಗಾಧರ ಸಂಬಣ್ಣಿ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ರಾಜಕೀಯದಲ್ಲಿ…

Read More

ವಿಡಿಎ ನೂತನ ಅಧ್ಯಕ್ಷರಾಗಿ ಡಾ. ಸಂಬಣ್ಣಿ ಅಧಿಕಾರ ಸ್ವೀಕಾರ

ಸಪ್ತಸಾಗರ ವಾರ್ತೆ ವಿಜಯಪುರ, ಫೆ. 6: ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಡಾ. ಗಂಗಾಧರ ಸಂಬಣ್ಣಿ ಅವರು ಶುಕ್ರವಾರ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಶಾಸಕ ವಿಠ್ಠಲ ಕಟಕದೊಂಡ, ಮಾಜಿ ಶಾಸಕ ರಾಜು ಆಲಗೂರ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮುಖಂಡರಾದ ಅಬ್ದುಲ ಹಮೀದ ಮುಶ್ರಿಫ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ. ಎಸ್. ಲೋಣಿ ವಿಡಿಎ ನಿಕಟಪೂರ್ವ ಅಧ್ಯಕ್ಷ ಕನ್ನಾನ್ ಮುಶ್ರಿಫ್, ಪ್ರಭುಗೌಡ ಲಿಂಗದಳ್ಳಿ, ಟಪಾಲ…

Read More