ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ -ಸಂತೋಷ ಬಂಡೆ
ಸಪ್ತಸಾಗರ ವಾರ್ತೆ,ವಿಜಯಪುರ, ಫೆ. 25:ಕನ್ನಡದ ನಾಡು ನುಡಿಗಾಗಿಯೇ ತಮ್ಮ ಜೀವನವನ್ನು ಮುಡಿಪಾಗಿಟ್ಟ ಆಲೂರು ವೆಂಕಟರಾಯರು ಪ್ರತಿಕೋದ್ಯಮ, ಸಾಹಿತ್ಯ, ಸಂಸ್ಕೃತಿಗೆ ನೀಡಿದ ಕೊಡುಗೆ ಅಪಾರ. ಕರ್ನಾಟಕ ಏಕೀಕರಣದ ನೆಲೆಯಲ್ಲಿ ಅವರು ಮಾಡಿದ ಕೆಲಸ ಅವಿಸ್ಮರಣೀಯ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಬುಧವಾರ ತಾಲೂಕಿನ ನಾಗಠಾಣ ಗ್ರಾಮದ ಅರಿವು ಕೇಂದ್ರದಲ್ಲಿ ಹಮ್ಮಿಕೊಂಡ ‘ಆಲೂರು ವೆಂಕಟರಾಯರ ಪುಣ್ಯ ಸ್ಮರಣೆ’ಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ಆಲೂರು ವೆಂಕಟರಾಯರು ಭಾಷೆ, ಸಾಹಿತ್ಯ, ಶಿಕ್ಷಣ, ಇತಿಹಾಸದ ಮೂಲಕ ಕನ್ನಡಿಗರನ್ನು ಒಗ್ಗೂಡಿಸಿ, 1956ರ ಕರ್ನಾಟಕ ಏಕೀಕರಣಕ್ಕೆ ಭದ್ರ…


