ದೇಶದಲ್ಲಿನ ಬಾಂಗ್ಲಾ ವಲಸಿಗರನ್ನು ಹೊರ ಹಾಕಬೇಕು-ಶಾಸಕ ಯತ್ನಾಳ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 25:ಬಾಂಗ್ಲಾ ವಲಸಿಗರಿಂದ ದೇಶಕ್ಕೆ ಅಪಾಯ. ಹೀಗಾಗಿ ಬಾಂಗ್ಲಾ ಒಲಸಿಗರು ಹಾಗೂ ಅವರಿಗೆ ಸಾಥ್ ನೀಡುವವರನ್ನು ದೇಶದಿಂದ ಹೊರ ಹಾಕಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬಾಂಗ್ಲಾ ದೇಶದಲ್ಲಿ ಮುಗ್ಧ ಹಿಂದೂ ಯುವಕನ ಸಜೀವ ದಹನ ಅತ್ಯಂತ ನೋವಿನ ಸಂಗತಿ ಎಂದರು.ಕಾಂಗ್ರೆಸ್ ಹಾಗೂ ಅಲ್ಪಸಂಖ್ಯಾತರ ಪಕ್ಷಗಳು ಬಾಂಗ್ಲಾ ವಲಸಿಗರನ್ನು ಓಟ ಬ್ಯಾಂಕ್ ಮಾಡಿಕೊಂಡಿದ್ದಾರೆ. ಅದಕ್ಕಾಗಿ ಅಕ್ರಮ ಬಾಂಗ್ಲಾ ವಲಸಿಗರಿಗೆ ಅಂತಿಮ ಗಡುವು ನೀಡಬೇಕು…

Read More

ಬಸ್- ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ: ಇಬ್ಬರು ಬೈಕ್ ಸವಾರರ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಡಿ. 25:ಸಾರಿಗೆ ಬಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆಜಿಲ್ಲೆಯ ನಿಡಗುಂದಿ ತಾಲೂಕಿನ ಮುದ್ದಾಪುರ ಕ್ರಾಸ್ ಬಳಿ ಗುರುವಾರ ಸಂಭವಿಸಿದೆ.ಮುದ್ದೇಬಿಹಾಳ ತಾಲೂಕಿನ ಕೊಪ್ಪ ತಾಂಡಾದ ಶಿವಪ್ಪ ರಾಮಪ್ಪ ಲಮಾಣಿ (60) ಹಾಗೂ ಬಸರಕೋಡ ಗ್ರಾಮದ ಬಸಪ್ಪ ಸಂಗಪ್ಪ ಸೂಳಿಬಾವಿ (67) ಎಂದು ಮೃತಪಟ್ಟ ದುರ್ದೈವಿಗಳು.ಮುದ್ದೇಬಿಹಾಳದಿಂದ ಬಾಗಲಕೋಟೆ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ಹಾಗೂ ನಿಡಗುಂದಿಯಿಂದ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್…

Read More

ರಾಜಧಾನಿಯಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

ಸಪ್ತಸಾಗರ ವಾರ್ತೆ ಬೆಂಗಳೂರು, ಡಿ. 25: ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲನ್ನು ಓಡಿಸಿರುವುದು ಸ್ವಾಗತಾರ್ಹವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಖಾಯಂ ರೈಲು ಸೇವೆಯಾಗಿ ಪರಿವರ್ತಿಸಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಆಗ್ರಹಿಸಿದ್ದಾರೆ.ಈ ಬಗ್ಗೆ ಗುರುವಾರ ಮಾತನಾಡಿರುವ ಅವರು, ಬೆಂಗಳೂರಿನಿಂದ ವಿಜಯಪುರಕ್ಕೆ ಈ ಎರಡೂ…

Read More

ಯಾವುದೇ ವಸ್ತು ಖರೀದಿಸುವಾಗ ಜಾಹೀರಾತುಗಳಿಗೆ ಮರುಳಾಗದೇ ಗುಣಮಟ್ಟ, ಮೌಲ್ಯ ಅರಿತು ಖರೀದಿಸಿ-ನ್ಯಾಯಾಧೀಶ ಅರವಿಂದ ಹಾಗರಗಿ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ. 25: ಗ್ರಾಹಕರು ಯಾವುದೇ ವಸ್ತುವನ್ನು ಖರೀದಿಸುವಾಗ ಜಾಹೀರಾತುಗಳಿಗೆ ಮರುಳಾಗದೇ ವಸ್ತುವಿನ ಗುಣಮಟ್ಟ ಮೌಲ್ಯವನ್ನು ಅರಿತು ಎಚ್ಚರಿಕೆಯಿಂದ ಖರೀದಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಅವರು ಕಿವಿಮಾತು ಹೇಳಿದರು.ವಿಜಯಪುರದ ಸಿಕ್ಯಾಬ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬುಧವಾರ ಆಯೋಜಿಸಿದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಮಾರುಕಟ್ಟೆಯಲ್ಲಿ ಯಾವುದೇ ವಸ್ತು ಖರೀದಿಸುವಾಗ ವಸ್ತುವಿನ ನೈಜತೆ, ಗುಣಮಟ್ಟ ಪರೀಕ್ಷಿಸಿದ ನಂತರವೇ ಖರೀದಿಸಲು…

Read More

ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ ವಾಜಪೇಯಿ: ಯತ್ನಾಳ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 25: ಪರಮಾಣು ಶಕ್ತಿಯಲ್ಲಿ ಭಾರತ ಮತ್ತೊಂದು ಹಂತಕ್ಕೆ ಹೋಗಲು ವಾಜಪೇಯಿ ಅವರ ದೂರದರ್ಶಿತ್ವ ಮತ್ತು ದೇಶಪ್ರೇಮವೇ ಕಾರಣ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿದರು.ನಗರದ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ವೃತ್ತದಲ್ಲಿ ಗುರುವಾರ ವಾಜಪೇಯಿ ಅವರ 101ನೇ ಜನ್ಮ ದಿನದ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ನಂತರ ಮಾತನಾಡಿದ ಅವರು, ವಾಜಪೇಯಿ ಅವರು ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ, ಅಜಾತಶತ್ರುರಾಗಿದ್ದ ಅವರು ರಾಷ್ಟ್ರ…

Read More

ಮಾಜಿ ಪ್ರಧಾನಿ ವಾಜಪೇಯಿ ಜನ್ಮದಿನ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 25 :ವಿಜಯಪುರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾರತ ರತ್ನ, ಮಾಜಿ ಪ್ರಧಾನಮಂತ್ರಿ, ಮಹಾನ್ ರಾಷ್ಟ್ರನಾಯಕ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಸುಶಾಸನ ದಿನವನ್ನಾಗಿ ಅತ್ಯಂತ ಶ್ರದ್ಧೆ ಹಾಗೂ ಗೌರವದಿಂದ ಆಚರಿಸಲಾಯಿತು.ದಿ.ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ದಿ.ಅಟಲ್ ಬಿಹಾರಿ ವಾಜಪೇಯಿ ಸಮೃದ್ಧ ಭಾರತ ನಿರ್ಮಾಣದ ದಿವ್ಯ ಕನಸು ಹೊಂದಿದ್ದ ಶ್ರೇಷ್ಠ ನಾಯಕ,…

Read More

ಕಂಪ್ಯೂಟೇಶನಲ್ ಡ್ರಗ್ ಡಿಸೈನ್ ಮತ್ತು ಮಾಲಿಕ್ಯೂಲರ್ ಸಿಮ್ಯುಲೇಶನ್ ಕಾರ್ಯಗಾರ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 25: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸೆಂಟರ್ ಆಫ್ ಅಡ್ವಾನ್ಸ್ಡ್ ಮೆಡಿಕಲ್ ರಿಸರ್ಚ್ ಮತ್ತು ಸ್ಕೂಲ್ ಆಫ್ ಅಪ್ಲೈಡ್ ಸೈನ್ಸ್ ಅಂಡ್ ಟೆಕ್ನಾಲಜಿ ಸಹಯೋಗದಲ್ಲಿ ಸೋಮವಾರ ಮತ್ತು ಮಂಗಳವಾರ ಕಂಪ್ಯೂಟೇಶನಲ್ ಡ್ರಗ್ ಡಿಸೈನ್ ಮತ್ತು ಮಾಲಿಕ್ಯೂಲರ್ ಸಿಮ್ಯುಲೇಶನ್ ವಿಷಯ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ನಡೆಯಿತು.ಈ ಕಾರ್ಯಾಗಾರ ಬಿ.ಎಲ್.ಡಿ.ಇ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ್ ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಪ್ರಭಾರಿ ಕುಲಪತಿ ಡಾ. ಅರುಣ ಚಂ. ಇನಾಮದಾರ,…

Read More

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಸಂಕಲ್ಪ: ಸಚಿವ ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 24: ಶಾಲೆಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಮುಂದುವರೆಸುವದರ ಮೂಲಕ ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಅಚಲ ಸಂಕಲ್ಪ ಹೊಂದಿರುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಬುಧವಾರ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದ ಮೋಹಿತೆ ವಸ್ತಿ ಮತ್ತು ಅರಕೇರಿ ಗ್ರಾಮದಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮೋಹಿತೆ ವಸ್ತಿಯಲ್ಲಿ ಕೆ.ಎಸ್.ಐ.ಐ.ಡಿ.ಸಿ ವತಿಯಿಂದ ಸಿ.ಎಸ್.ಆರ್ ಅನುದಾನದಲ್ಲಿ ಪ್ರಾಥಮಿಕ ಶಾಲೆಯಲ್ಲಿ…

Read More

ಆಯುರ್ವೇದ ಚಿಕಿತ್ಸಾ ಪದ್ಧತಿ ಉಳಿಸಬೇಕು- ಡಾ. ಜಿ. ಬಿ. ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 24: ಆಯುರ್ವೇದ ಪ್ರಾಚೀನ ಕಾಲದ ಶಾಸ್ತ್ರೀಯ ವಿದ್ಯೆಯಾಗಿದೆ. ವೈದ್ಯಕಿಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡುವುದರ ಮೂಲಕ ಆಯುರ್ವೇದವನ್ನು ಉಳಿಸಬೇಕು ಹಾಗೂ ಬೆಳೆಸಬೇಕು ಎಂದು ನವದೆಹಲಿಯ ಸಿಸಿಐಎಂ ಮಾಜಿ ಸದಸ್ಯ ಮತ್ತು ಗದಗ ಡಿ. ಜಿ. ಎಂ ಆಯುರ್ವೇದ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ. ಜಿ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ನಗರದ ಬಿಎಲ್‌ಡಿಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮಾಗಮ ಕಾರ್ಯಕ್ರಮದಲ್ಲಿ ಪಾಲ್ಗೋಂಡು ಅವರು…

Read More

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಈರಯ್ಯ ಹಾಗೂ ಜಿಲ್ಲಾ ಕಾರ್ಯದರ್ಶಿಯಾಗಿ ಸಾಯಬಣ್ಣನೇಮಕ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 24:ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಈರಯ್ಯ ಹಿರೇಮಠ ಹಾಗೂ ಜಿಲ್ಲಾ ಕಾರ್ಯದರ್ಶಿಯಾಗಿ ಸಾಯಬಣ್ಣ ಹಳ್ಳಿ ನೇಮಕಗೊಂಡಿದ್ದಾರೆ.ಕರ್ನಾಟಕ ರಾಜ್ಯ ಉಪಾಧ್ಯಕ್ಷ ಎನ್.ಸಿ. ಕಾಂಬಳೆ ಹಾಗೂ ರಾಜ್ಯ ಕಾರ್ಯದರ್ಶಿ ವಿನಾಯಕ ಸೊಂಡೂರ್ ಅವರ ಶಿಪಾರಸ್ಸು ಮೇರೆಗೆ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ರಮೇಶ ಬೇಕ್ರಿ ಅವರು ಈರಯ್ಯ ಶಾಂತಯ್ಯ ಹಿರೇಮಠರನ್ನು ಜಿಲ್ಲಾಧ್ಯಕ್ಷರನ್ನಾಗಿ ಹಾಗೂ ಸಾಯಬಣ್ಣ ಬಸಪ್ಪ ಹಳ್ಳಿ ಅವರನ್ನು ಜಿಲ್ಲಾ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Read More