ಗ್ರಾಮ ಸ್ವಚ್ಛತೆಗೆ ಆಧ್ಯತೆ ನೀಡಿ : ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ
ಸಪ್ತಸಾಗರ ವಾರ್ತೆ, ವಿಜಯಪುರ,ಡಿ.1 :ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅವರು ಸೋಮವಾರ ತಿಕೋಟಾ ತಾಲೂಕಿನ ಹೊನವಾಡ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.ಹೊನವಾಡ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಭೇಟಿ ನೀಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳಾದ ತೆರಿಗೆ ವಸೂಲಾತಿ, ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ವೈಯಕ್ತಿಕ ಶೌಚಾಲಯಗಳ ಪ್ರಗತಿ, ದ್ರವ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಪ್ರಗತಿ, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಇ-ಕೆವೈಸಿ…


