ಪ್ರತಿ ಕ್ವಿಂಟಲ್ ಗೆ 7221 ರೂ. ಬೆಂಬಲ ಬೆಲೆಯಡಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಆರಂಭಿಸಲು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 26: ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರವು ಬೆಂಬಲ ಬೆಲೆ ಘೋಷಿಸಿರುವ ಎಫ್ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಕ್ವಿಂಟಲ್ಗೆ 7721 ರೂ. ಬೆಂಬಲೆ ಬೆಲೆಯಡಿ ಖರೀದಿಗೆ ರೈತರ ನೋಂದಣಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಿ ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆ ಪ್ರಾರಂಭಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.ಸೆ.26ರಂದು ನಡೆದ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಸಭೆಯಲ್ಲಿ…


