ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ಸಿದ್ದರಾಮಾನಂದ ಪುರಿ ಮಹಾಸ್ವಾಮಿಗಳ ನಿಧನಕ್ಕೆ ಸಿಎಂ ಸಂತಾಪ

ಸಪ್ತಸಾಗರ ವಾರ್ತೆ, ಬೆಂಗಳೂರು, ಜ. 15:
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ಸಿದ್ದರಾಮಾನಂದ ಪುರಿ ಮಹಾಸ್ವಾಮಿಗಳು ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಶ್ರೀಗಳು ದೈವಾಧೀನರಾದ ಸುದ್ದಿ ನೋವುಂಟು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ಅವರು,
ಧಾರ್ಮಿಕ ಕಾರ್ಯಗಳ ಜೊತೆಗೆ ಸಮಾಜದ ಏಳಿಗೆಯ ಬಗ್ಗೆ ಅಪಾರ ಕಾಳಜಿ, ಶ್ರದ್ಧೆ ಹೊಂದಿದ್ದ ಶ್ರೀಗಳ‌ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಕಂಬನಿ ಮಿಡಿದಿದ್ದಾರೆ.
ಶ್ರೀಗಳ ದಿವ್ಯಾತ್ಮಕ್ಕೆ ಚಿರಶಾಂತಿ ದೊರಕಲಿ, ಶ್ರೀ ಮಠದ ಭಕ್ತಾದಿಗಳು ಹಾಗೂ ಅಪಾರ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಅವರು ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.

Share this