ಸಪ್ತಸಾಗರ ವಾರ್ತೆ, ದಾವಣಗೆರೆ, ಡಿ. 26: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಚಿವ ದಿ. ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಲು ದಾವಣಗೆರೆಗೆ ಆಗಮಿಸಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿ, ಸಾರ್ವಜನಿಕರ ಅಹವಾಲು ಪಡೆದರು.
ಬಳಿಕ ಶಾಮನೂರು ಶಿವಶಂಕರಪ್ಪ ಅವರ ಸಮಾದಿಗೆ ಪುಷ್ಪನಮನ ಸಲ್ಲಿಸಿ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಈಶ್ವರ್ ಖಂಡ್ರೆ ಸೇರಿ ಹಲವು ಮಂದಿ ಸಚಿವರು, ಶಾಸಕರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಾಮನೂರ ನುಡಿನಮನ ಕಾರ್ಯಕ್ರಮದಲ್ಲಿ ಸಿಎಂ ಭಾಗಿ


