ಸಪ್ತಸಾಗರ ವಾರ್ತೆ, ಬೆಂಗಳೂರು, ಮೇ. 28:
ಮುಖ್ಯಮಂತ್ರಿ ಸ್ಥಾನಕ್ಕೆ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಘೋಷಿಸಿದರು.
ಮಧ್ಯಾಹ್ನ 2-30ಕ್ಕೆ ಲೋಕಭವನಕ್ಕೆ ತೆರಳಿದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ ರಾಜೀನಾಮೆ ಸಲ್ಲಿಸಿದ ಬಳಿಕ ಬೆಂಗಳೂರಿನ ಅವರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನಾನು ಯಾರ ಒತ್ತಡಕ್ಕೆ ಮಣಿದು ರಾಜೀನಾಮೆ ನೀಡಿಲ್ಲ. ಸ್ವಯಂಪ್ರೇರಿತನಾಗಿ ರಾಜೀನಾಮೆ ನೀಡಿದ್ದೇನೆ.
ಹೈಕಮಾಂಡಿಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ ಎಂದರು.
ವರಿಷ್ಠರಿಂದ ನನಗೆ ರಾಷ್ಟ್ರ ರಾಜಕಾರಣಕ್ಕೆ ಆಫರ್ ಬಂದಿದೆ. ವರಿಷ್ಠರು ರಾಜ್ಯಸಭಾಕ್ಕೆ ಬರಲು ಆಹ್ವಾನ ನೀಡಿದ್ದಾರೆ. ಆದರೆ ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ ಎಂದು ನಯವಾಗಿ ನಿರಾಕರಿಸಿದ್ದೇನೆ. ಆದರೆ ರಾಜ್ಯ ರಾಜಕಾರಣದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಹೇಳಿದರು.
ನನ್ನ ಕೊನೆಯ ಉಸಿರಿರುವವರೆಗೆ ಕೋಮುವಾದಿಗಳ ವಿರುದ್ದ ಹೋರಾಟ ನಿರಂತರವಾಗಿ ಮಾಡುತ್ತೇನೆ ಎಂದು ತಿಳಿಸಿದರು.
ಸಂವಿಧಾನ ಇರುವುದರಿಂದಲೇ ಒಳ್ಳೆಯದಾಗಿದೆ. ಸಂವಿಧಾನ ವಿರೋಧಿಸುವವರ ವಿರುದ್ಧವೂ ಹೋರಾಟ ಮಾಡುತ್ತೇನೆ ಎಂದು ನುಡಿದರು.
ನಾನು ಯಾವುದೇ ರೀತಿ ಆಸ್ತಿ ಮಾಡಿಲ್ಲ. ವಿರೋಧದ ಮಧ್ಯೆಯೂ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಒಳ್ಳೇಯ ಆಡಳಿಚ ನೀಡಿದ ಸಂತೃಪ್ತಿ ಇದೆ ಎಂದರು.
ಸಿದ್ದರಾಮಯ್ಯ ಎರಡು ಬಾರಿ ಸಿಎಂ ಆಗಿದ್ದರು. 8 ವರ್ಷ ಕಾಲ ಸಿಎಂ ಹುದ್ದೆಯಲ್ಲಿ ಇದ್ದರು. ಎರಡು ಬಾರಿ ವಿರೋಧ ಪಕ್ಷದ ನಾಯಕರಾಗಿದ್ದರು.
ಸುದ್ದಿಗೋಷ್ಠಿ ಬಳಿಕ ವಿಶೇಷ ವಿಮಾನದಲ್ಲಿ ದೆಹಲಿಗೆ ಸಿದ್ದರಾಮಯ್ಯ ತೆರಳಿದರು.
ದೆಹಲಿಯಲ್ಲಿ ರಾಹುಲ್, ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕರನ್ನು ಭೇಟಿಯಾಗಿ ಅಧಿಕಾರ ನೀಡಲು ಸಹಕರಿಸಿದ ವರಿಷ್ಠರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೋಮುವಾದಿಗಳ ವಿರುದ್ದ ನಿರಂತರ ಹೋರಾಟ: ಸಿದ್ದರಾಮಯ್ಯ


