ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 8:
ಜಿಲ್ಲಾ ಪಂಚಾಯತಿ, ಕೌಶಲ್ಯಾಭಿವೃದ್ಧಿ ಉದ್ಯಮಿಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ-2026 ಕ್ಕೆ ಜಿಲ್ಲಾಧಿಕಾರಿಗಳಾದ ಕೆ. ಆನಂದ ಅವರು ಚಾಲನೆ ನೀಡಿದರು.
ಸ್ವ-ಸಹಾಯ ಸಂಘದ ಮಹಿಳೆಯರು ಉತ್ಪಾದಿಸಿದ ಉತ್ಪನ್ನಗಳ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಸ್ವ-ಸಹಾಯ ಸಂಘಗಳ ಮಹಿಳೆಯರು ತಯಾರಿಸಿದ ಹಲವಾರು ವಸ್ತುಗಳನ್ನು ಜಿಲ್ಲಾಧಿಕಾರಿಗಳು ವೀಕ್ಷಿಸಿ, ಪ್ರಶಂಸಿಸಿದರು. ಗ್ರಾಮೀಣ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಹೊಂದಬೇಕು. ಎಲ್ಲ ಮಹಿಳೆಯರು ಸಬಲೀಕರಣ ಹೊಂದಬೇಕು ಎಂದು ಮಹಿಳೆಯರಿಗೆ ಪ್ರೇರಣೆ ನೀಡಿದರು.
ಮೇಳದಲ್ಲಿ ಜಿಲ್ಲೆಯ 13 ತಾಲೂಕುಗಳ ಸ್ವ-ಸಹಾಯ ಸಂಘಗಳ ಮಹಿಳಾ ಉದ್ಯಮಿದಾರರು ಭಾಗವಹಿಸಿದ್ದರು.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಎನ್ ಆರ್ ಎಲ್ ಎಂ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅತ್ಯುತ್ತಮವಾಗಿ ಕಾರ್ಯಸುತ್ತಿರುವ ಕೃಷಿ ಸಖಿಯರು ಹಾಗೂ ಪಶು ಸಖಿಯರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ. ಕೆ. ಚವ್ಹಾಣ, ಜಿಲ್ಲಾ ಪಂಚಾಯತಿಯ ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ, ಜಿಲ್ಲೆಯ ಎಲ್ಲ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಎನ್ ಆರ್ ಎಲ್ಎಂ ಸಿಬ್ಬಂದಿ ಉಪಸ್ಥಿತರಿದ್ದರು.
ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಲು ಡಿಸಿ ಆಶಯ


