ಸಪ್ತಸಾಗರ ವಾರ್ತೆ ವಿಜಯಪುರ, ಅ. 16:
ಮಹಾರಾಷ್ಟ್ರದ ಕನ್ಹೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧಿಸಿ
ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದಲ್ಲಿ ಸಿಎಂ ಕೃಪಾಪೋಷಿತ ಲಿಂಗಾಯತ ಮಠಾಧೀಶರ ಒಕ್ಕೂಟ ಎಂದು ಪ್ರಚೋದನಕಾರಿ ಭಾಷಣ ಮಾಡಿದ್ದ ಹಿನ್ನೆಲೆ ಕನ್ಹೇರಿ ಶ್ರೀಗಳಿಗೆ ದಿನಾಂಕ 16-10-2025 ರಿಂದ 14-12- 2025 ವರೆಗೆ ಎರಡು ತಿಂಗಳ ಕಾಲ ಜಿಲ್ಲಾ ಪ್ರವೇಶ ನಿರ್ಬಂಧಿಸಿ ಆದೇಶ ಮಾಡಿದ್ದಾರೆ.
ಅ. 16, 17 ರಂದು ಬಸವನ ಬಾಗೇವಾಡಿಯಲ್ಲಿ ನಡೆಯುವ ಸಿದ್ದರಾಮೇಶ್ವರ ಸಪ್ತಾಹ ಕಾರ್ಯಕ್ರಮಕ್ಕೆ ಬರುವುದಾಗಿ ಕನ್ಹೇರಿ ಶ್ರೀಗಳು ಹೇಳಿದ್ದರು.
ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಶ್ರೀಗಳ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕನ್ಹೇರಿ ಶ್ರೀಗಳಿಗೆ ಎರಡು ತಿಂಗಳ ಕಾಲ ಜಿಲ್ಲಾ ಪ್ರವೇಶ ನಿರ್ಬಂಧಿಸಿ ಡಿಸಿ ಆದೇಶ


