ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 10:
ವಿವಿಧ ಪ್ರಮಾಣ ಪತ್ರಗಳನ್ನು ಸಾರ್ವಜನಿಕರಿಗೆ ಸಕಾಲಕ್ಕೆ ವಿತರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರ ಬಬಲೇಶ್ವರ ತಾಲೂಕಿನ ಮಮದಾಪುರ ನಾಡಕಚೇರಿಯ ಅಟಲ್ ಜನಸ್ನೇಹಿ ಕೇಂದ್ರದಲ್ಲಿ ನೀಡಲಾಗುವ ವಿವಿಧ ಪ್ರಮಾಣ ಪತ್ರಗಳ ಹಾಗೂ ಪಿಂಚಣಿ ಯೋಜನೆಗಳನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ಅಟಲ್ ಜನಸ್ನೇಹಿ ಕೇಂದ್ರದಲ್ಲಿ ನೀಡಲಾಗುವ ವಿವಿಧ ಪ್ರಮಾಣ ಪತ್ರಗಳನ್ನು ಸಾರ್ವಜನಿಕರಿಗೆ ಸಕಾಲಕ್ಕೆ ವಿತರಿಸಬೇಕು ಎಂದು ಸೂಚಿಸಿದ ಅವರು, ಬಳಿಕ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.
ಇದಕ್ಕೂ ಮೊದಲು ಗ್ರಾಮದಲ್ಲಿ ಅರಣ್ಯ ಇಲಾಖೆಯವರು ಆಯೋಜಿಸಿದ್ದ ಹಸರೀಕರಣ ಮತ್ತು ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಸಿ ನೆಟ್ಟು, ಸಸಿಗೆ ನೀರುಣಿಸಿದರು.
ನಂತರ ಮಮದಾಪುರ ದೊಡ್ಡ ಕೆರೆಗೆ ಬೇಟಿ ನೀಡಿ ಕೆರೆ ತುಂಬಿಸುವ ಯೋಜನೆ ಬಗ್ಗೆ ಪರಿಶೀಲಿಸಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಬಳಿಕ ಬಬಲೇಶ್ವರ ಪಟ್ಟಣದ ಸರಕಾರಿ ಐ.ಟಿ.ಐ ಕಾಲೇಜಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026ರ ಕಾರ್ಯದ ಕುರಿತು ಮತಗಟ್ಟೆ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026ರ ಕುರಿತು ಸೂಕ್ತ ಸಲಹೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕಂದಾಯ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.
ತಿಕೋಟ- ಬಬಲೇಶ್ವ ತಾಲೂಕಿನ ವಿವಿಧ ಕಚೇರಿಗಳಿಗೆ ಡಿಸಿ ಭೇಟಿ, ಪರಿಶೀಲನೆ


