ಸರ್ಕಾರಿ ವೈದ್ಯಕೀಯ ಕಾಲೇಜ್ ಘೋಷಣೆ ವಿಳಂಬ: ಹೋರಾಟಗಾರರಿಂದ ಸಚಿವ ಎಂ. ಬಿ. ಪಾಟೀಲರ ಮನೆಗೆ ಮುತ್ತಿಗೆ ಯತ್ನ

ಸಪ್ತಸಾಗರ ವಾರ್ತೆ ವಿಜಯಪುರ, ಜ. 1:
ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್ ಘೋಷಣೆಗೆ ಸರ್ಕಾರದ ವಿಳಂಬ ಧೋರಣೆ ಖಂಡಿಸಿ ಹೋರಾಟಗಾರರು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲರ ಮನೆಗೆ ಮುತ್ತಿಗೆ ಹಾಕಲು ಗುರುವಾರ ವಿಫಲ ಯತ್ನ ನಡೆಸಿದರು.
ಹೋರಾಟಗಾರರು ಸಚಿವ ಎಂ.ಬಿ. ಪಾಟೀಲ ಅವರ ಮನೆಗೆ ಮುತ್ತಿಗೆ ಹಾಕಲು ತೆರಳುತ್ತಿದ್ದಾಗ ಮಧ್ಯದಲ್ಲಿಯೇ ಪೊಲೀಸರು ಅವರನ್ನು ತಡೆದು ಬಂಧಿಸಿದರು.
ಇದರಿಂದ ಆಕ್ರೋಶಗೊಂಡ ಹೋರಾಟಗಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು. ಸರ್ಕಾರ ಹೋರಾಟಗಾರರನ್ನು ಪೊಲೀಸರ ಮುಖಾಂತರ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಪ್ರತಿಭಟನೆಕಾರರು ಆರೋಪಿಸಿದರು.
ಸಚಿವರು ಸರ್ಕಾರದ ಮೇಲೆ ತೀವ್ರ ಒತ್ತಡ ತಂದು ಕೂಡಲೇ ನ್ಯಾಯಯುತ ನಮ್ಮ ಬೇಡಿಕೆಯನ್ನು ಈಡೇರಿಸಬೇಕು. ಬೇಡಿಕೆ ಈಡೇರುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.
ಬಿ. ಭಗವಾನರೆಡ್ಡಿ, ಅರವಿಂದ ಕುಲಕರ್ಣಿ, ಅನಿಲ ಹೊಸಮನಿ, ಸುರೇಖಾ ರಜಪೂತ, ಬೋಗೇಶ ಸೋಲಾಪುರ ಮತ್ತಿತರ ಹೋರಾಟಗಾರರು ನೇತೃತ್ವ ವಹಿಸಿದ್ದರು.

Share this