ವಿಜಯಪುರ ಕೇಂದ್ರ ಬಸ್ ನಿಲ್ದಾಣದ ಮುಂದೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪನೆ ಮಾಡಲು ಒತ್ತಾಯ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26 :
ವಿಜಯಪುರ ಕೇಂದ್ರ ಬಸ್ ನಿಲ್ದಾಣದ ಮುಂದೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಒತ್ತಾಯಿಸಿ ವಿಜಯಪುರ ನಗರ ಘಟಕ ಕುರುಬರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ವಿಜಯಪುರ ಕೇಂದ್ರ ಬಸ್ ನಿಲ್ದಾಣ ಮುಂಭಾಗದಲ್ಲಿ ವೀರರಾಣಿ ಕಿತ್ತೂರ ಚನ್ನಮ್ಮನವರ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು ಸಂತೋಷದ ಸಂಗತಿ. ಆದರೆ ಸ್ವಾತಂತ್ರ್ಯ ಸಮರವನ್ನು ಸಾರಿದ ಕೀರ್ತಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಅವರ ಎಡಭಾಗದಲ್ಲಿ ಪ್ರತಿಷ್ಠಾಪನೆ ಮಾಡಿದರೆ ಅವರ ಹೆಸರು ಯುವ ಪೀಳಿಗೆ ಸದಾ ನೆನಪಿನಲ್ಲಿ ಉಳಿಯಲು ಸಾಧ್ಯವಾಗುತ್ತದೆ. ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ವೀರರಾಣಿ ಕಿತ್ತೂರ ಚೆನ್ನಮ್ಮ ಸಂಗೊಳ್ಳಿ ರಾಯಣ್ಣ ಎಂದು ಮರು ನಾಮಕರಣ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮಲ್ಲಣ್ಣ ಶಿರಶ್ಯಾಡ, ನಗರ ಘಟಕದ ಜಿಲ್ಲಾಧ್ಯಕ್ಷ ರಾಜಣ್ಣ ಕಗ್ಗೋಡ, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ಸಂಗೋಗಿ, ನಗರ ಕಾರ್ಯದರ್ಶಿ ರಮೇಶ ಕಾಲೇಬಾಗ, ಸಮಾಜದ ಮುಖಂಡರಾದ ರಾಜು ಬಿರಾದಾರ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಗೌರಮ್ಮ ಮುತ್ತತ್ತಿ, ಕರ್ನಾಟಕ ಪ್ರದೇಶ ಕುರುಬರ ಸಂಘದ ಸದಸ್ಯರಾದ ರಾಜೇಶ್ವರಿ ಯರನಾಳ, ಅಹಿಂದ ಮುಖಂಡರಾದ ಸೋಮನಾಳ ಕಳ್ಳಿಮನಿ, ಅಹಿಂದ ಜಿಲ್ಲಾಧ್ಯಕ್ಷರಾದ ಮಾಳು ಗುಗದಡ್ಡಿ, ಶಂಕರ ಪೂಜಾರಿ, ಮಲ್ಲು ಬಿದರಿ, ಚಂದ್ರಶೇಖರ ನಾಗರಾಳ, ಶಂಕರ ಪೂಜಾರಿ, ಸಾಗರ ಹೊಸಮನಿ, ಲಕ್ಷ್ಮಣ ಪಾಟೀಲ, ಯಲ್ಲಪ್ಪ ಗುಂಡಕರ್ಜಗಿ, ಎಚ್.ಎಲ್. ಮಾಲಗಾಂವಿ, ನೀಲಕಂಠ ಠಾಣೆ, ಅಕ್ಷಯ ಪಾಟೀಲ,ವಿಠ್ಠಲ ಕೋರಿ, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Share this