ಡೋಣಿ ನದಿಗೆ ಜಿಲ್ಲಾಧಿಕಾರಿ ಭೇಟಿ, ಪ್ರವಾಹ ತಡೆಗೆ ಕ್ರಮಗಳ ಕುರಿತು ಪರಿಶೀಲನೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30
ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಶನಿವಾರ ಜಿಲ್ಲೆಯ ಸಾರವಾಡ ಬಳಿ ಡೋಣಿ ನದಿಗೆ ಭೇಟಿ ನೀಡಿ ಪರಿಶೀಲಿಸಿದರು.
ಡೋಣಿ ನದಿಯ ಪ್ರವಾಹ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಡಾ. ಆನಂದ ಅವರು ಜಿಲ್ಲಾ ಪಂಚಾಯತಿಯ‌ ಮುಖ್ಯ‌ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರೊಂದಿಗೆ ಜಂಟಿಯಾಗಿ ಜಿಲ್ಲೆಯ ಸಾರವಾಡದ ಹತ್ತಿರದ ಡೋಣಿ ನದಿಯ ಸೇತುವೆಯ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ ಪ್ರವಾಹ ತಡೆಗೆ ಅನುಸರಿಸಬೇಕಾದ ಕ್ರಮಗಳ ಕುರಿತು ಖುದ್ದಾಗಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕೃಷಿ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ,‌ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರಾಹುಲ್ ಭಾವಿದೊಡ್ಡಿ, ಅಲ್ಪ‌ಸಂಖ್ಯಾತರ‌‌ ಇಲಾಖೆಯ ಅಧಿಕಾರಿ ಪ್ರಶಾಂತ ಪೂಜಾರಿ, ತಹಶೀಲ್ದಾರ ಶಾಂತಲಾ ಚಂದನ, ರೈತರಾದ ಭೀಮಸೇನ, ಮಲ್ಲಿಕಾರ್ಜುನ ಭಟಗಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share