ಧರ್ಮಸ್ಥಳ ಪ್ರಕರಣ: ಸೂಕ್ತ ತನಿಖೆಗೆ ಆಗ್ರಹಿಸಿ ಸಿಎಂಗೆ ಆಮ್ ಆದ್ಮಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ,ಜು. 25:
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸಿ ನೊಂದವರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಅನಂತರ ಜಿಲ್ಲಾಧಿಕಾರಿ ಮೂಲಕ ಈ ಬಗ್ಗೆ ಸಿಎಂ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ಮಾತನಾಡಿ, ಕರ್ನಾಟಕದ ನಾಗರಿಕರ ಪರವಾಗಿ ಮತ್ತು 2012 ರಲ್ಲಿ ಧರ್ಮಸ್ಥಳದಲ್ಲಿ ಕ್ರೂರವಾಗಿ ಅತ್ಯಾಚಾರ ಮತ್ತು ಕೊಲೆಗೆ ಒಳಗಾದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಅವರ ಕುಟುಂಬದೊಂದಿಗೆ ಆಮ್ ಆದ್ಮಿ ಪಕ್ಷ ಸದಾ ನಿಲ್ಲುತ್ತದೆ. ಪ್ರಕರಣದಲ್ಲಿ ನ್ಯಾಯವನ್ನು ಒದಗಿಸುವಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಬಾಬು ಬಿಜಾಪುರ, ಅವಿನಾಶ ಐಹೊಳೆ, ಜಿಲ್ಲಾ ಮಾಧ್ಯಮ ಉಸ್ತುವಾರಿ ಸಂಜು ಶೆಟಗಾರ, ಬಬಲೇಶ್ವರ ಮತಕ್ಷೇತ್ರದ ಅಧ್ಯಕ್ಷ ಮೀರಾಸಾಬ ತೊದಲಬಾಗಿ, ದೇವರಹಿಪ್ಪರಗಿ ಮತಕ್ಷೇತ್ರದ ಅಧ್ಯಕ್ಷ ಬಸವರಾಜ ಖಾನಾಪುರ, ನಗರ ಅಧ್ಯಕ್ಷ ಆಮೀರ್ ಸೊಹೈಲ್ ಪಟೇಲ್, ನಗರ ಪ್ರಧಾನ ಕಾರ್ಯದರ್ಶಿ ಮೀರಾಸಾಬ ದಳವಾಯಿ ಹಾಗೂ ಪಕ್ಷದ ಮುಖಂಡರಾದ ರಮೇಶ ದೊಡ್ಡಮನಿ, ಪೀರಸಾಬ ವಾಲಿಕಾರ, ಮೆಹಬೂಬ ಗೋರಿ ಉಪಸ್ಥಿತರಿದ್ದರು.

Share this