ಸಪ್ತಸಾಗರ ವಾರ್ತೆ,ವಿಜಯಪುರ,ಏ.13
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವಿಜಯಪುರ ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ವಿಜಯಪುರ ಇವರ ಸಹಯೋಗದಲ್ಲಿ, ಏ. 15ರ ಬೆಳಿಗ್ಗೆ 10 ಗಂಟೆಗೆ ನಗರದ ಬಾಗಲಕೋಟೆ ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಅವರಣದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.
ಈ ಸಂದರ್ಶನದಲ್ಲಿ ಪ್ರತಿಷ್ಠಿತ ಕಂಪನಿಯಾದ SUZLON Energy Ltd. ಭಾಗವಹಿಸಿ, ತಮ್ಮಲ್ಲಿರುವ ಖಾಲಿ ಹುದ್ದೆಗಳಿಗೆ ಭಾರತದಾದ್ಯಂತ ಅಭ್ಯರ್ಥಿಗಳನ್ನುಆಯ್ಕೆ ಮಾಡಿಕೊಳ್ಳಲಿದೆ.
ಡಿಪ್ಲೋಮಾ ಪದವಿಯಲ್ಲಿ ಮೆಕ್ಯಾನಿಕಲ್,ಎಲೆಕ್ಟ್ರಾನಿಕ್ಸ್, ಮತ್ತು ಕಮ್ಯುನಿಕೇಶನ್ ಆಟೋಮೊಬೈಲ್ ಪೂರೈಸಿದ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಸಂದರ್ಶನದಲ್ಲಿ ತಮ್ಮ ಸ್ವ-ವಿವರ (Resume) ಮತ್ತು ವಿದ್ಯಾರ್ಹತೆ ಸಂಬಂಧಿತ ಮೂಲ ದಾಖಲಾತಿಗಳು ಹಾಗೂ ನೆರಳಚ್ಚು (ಝೆರಾಕ್ಸ್) ಪ್ರತಿಗಳೊಂದಿಗೆ ನೇರ ಸಂದರ್ಶನದಲ್ಲಿ ಹಾಜರಾಗುವಂತೆಯೂ ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಖುದ್ದಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ ಅಥವಾ ದೂರವಾಣಿ ಸಂಖ್ಯೆ 9741650568 ಹಾಗೂ 9945000793 ಮೂಲಕ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


