ಸಪ್ತಸಾಗರ ವಾರ್ತೆ,ವಿಜಯಪುರ, ಅ.14 :
ನಗರದ ಕುಡಿಯುವ ನೀರು ಸರಬರಾಜಿನ ಪ್ರಮುಖ ಏರು ಕೊಳವೆ ಮಾರ್ಗದಲ್ಲಿ ಸೋರಿಕೆ ಉಂಟಾಗಿರುವ ಹಿನ್ನೆಲೆಯಲ್ಲಿ, ಅ.15ರಂದು ನಗರದ ಹಲವು ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಕೊಲ್ಹಾರ ಮೂಲ ಸ್ಥಾವರದಿಂದ ಜಲನಗರ ಪಂಪ್ಹೌಸ್ಗೆ ನೀರು ಪೂರೈಸುವ 965/900 ಮಿ.ಮೀ. ವ್ಯಾಸದ ಮುಖ್ಯ ಏರು ಕೊಳವೆ ಮಾರ್ಗವು ದೇವಗಿರಿ ತೋಟದ ಬಳಿ ಅ.14ರಂದು ಹಾನಿಗೊಳಗಾಗಿದೆ. ಇದರಿಂದ ನೀರು ಸೋರಿಕೆಯಾಗಿದ್ದು, ಜಲಮಂಡಳಿ ವತಿಯಿಂದ ದುರಸ್ತಿ ಕಾಮಗಾರಿಯನ್ನು ತಕ್ಷಣ ಕೈಗೆತ್ತಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಕೊಲ್ಹಾರ ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ಪೂರೈಕೆಯಾಗುವ ನಗರದ ವಿವಿಧ ಪ್ರದೇಶಗಳಲ್ಲಿ ಅ.15ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ, ದುರಸ್ತಿ ಕಾಮಗಾರಿಗೆ ಜಲಮಂಡಳಿಯೊಂದಿಗೆ ಸಹಕರಿಸುವಂತೆ ಜಲಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


