ಸಪ್ತಸಾಗರ ವಾರ್ತೆ,ವಿಜಯಪುರ, ಏ. 17:
ಜಿಲ್ಲಾಧಿಕಾರಿ ಕಚೇರಿ ಎಸ್. ಡಿ. ಎ., ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಇಬ್ಬರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೆಟ್ರೋಲ್ ಬಂಕ್ ಜಾಗದ ನಕಾಶೆ ಆನ್ ಲೈನ್ ನಲ್ಲಿ ಅಪ್ಲೋಡ್ ಮಾಡಲು ಲಂಚ ಸ್ವೀಕರಿಸುತ್ತಿದ್ದ ಜಿಲ್ಲಾಡಳಿತ ಕಚೇರಿಯ
ಎಸ್ ಡಿ ಎ ಅರವಿಂದ ಪವಾರ
ಗುತ್ತಿಗೆ ಆಧಾರದಲ್ಲಿ ಸೇವೆ ಮಾಡುವ
ಕಂಪ್ಯೂಟರ್ ಆಪರೇಟರ್
ಅಯ್ಯಬ್ ತೊನಶ್ಯಾಳ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
15,000 ನಗದು ಸ್ವೀಕಾರ ಮಾಡುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಎಸ್ ಡಿ ಎ ಅರವಿಂದ ಹಾಗೂ ಕಂಪ್ಯೂಟರ್ ಆಪರೇಟರ್ ಅಯ್ಯೂಬ್ ಇಬ್ಬರ ವಿಚಾರಣೆ ನಡೆಸಿದ್ದಾರೆ.
ಲೋಕಾಯುಕ್ತ ಪೊಲೀಸರು
ಎಸ್ ಡಿ ಎ ಅರವಿಂದ ಪವಾರ ಹಾಗೂ ಕಂಪ್ಯೂಟರ್ ಆಪರೇಟರ್ ಅಯ್ಯುಬ್ ಎಂಬುವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಇನ್ಸಪೆಕ್ಟರ್ ಆನಂದ ಟಕ್ಕಣ್ಣನವರ ಹಾಗೂ ಇತರೆ ಅಧಿಕಾರಿಗಳು ದಾಳಿಯಲ್ಲಿ ಭಾಗಿಯಾಗಿದ್ದರು.
Editor
Rudrappa B Asangi
Editor
Managing Editor
Chetan Asangi
Managing Editor


