ಡಿ.22 ರಂದು ಜಿಲ್ಲಾ ಮಟ್ಟದ ಕೆಡಿಪಿ ಸಭೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.11:
ಜಿಲ್ಲಾ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ 2025-26ನೇ ಒಂದನೇ ಹಾಗೂ ಎರಡನೇ ತ್ರೈಮಾಸಿಕದ ಸಭೆಯು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಡಿ.22 ರಂದು ಬೆಳಿಗ್ಗೆ 10:30ಕ್ಕೆ ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಈ ಸಭೆಯಲ್ಲಿ ಸದಸ್ಯರು ತಪ್ಪದೇ ಭಾಗವಹಿಸಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ
ರಿಷಿ ಆನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this