ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರ ಜಿಲ್ಲಾ ಪ್ರವಾಸ

ಸಪ್ತಸಾಗರ ವಾರ್ತೆ, ವಿಜಯಪುರ,ಫೆ.10: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ (ಬ್ಯಾಡಗಿ) ಅವರು, ಫೆ.13ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಫೆ.13ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ವಿಜಯಪುರ ಜಿಲ್ಲಾ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸುವ ಅವರು, ಫೆ.21ರಂದು ನಡೆಯುವ ವಿಜಯಪುರ ಜಿಲ್ಲಾ ಕರ್ನಾಟಕ ಗ್ಯಾರಂಟಿ ಯೋಜನೆಗಳ ಉತ್ಸವ, ಕಾರ್ಯಾಗಾರದ ಪೂರ್ವ ಸಿದ್ಧತೆಗಳ ಪರಿಶೀಲನೆ ನಡೆಸುವರು. ಅಂದು ಮಧ್ಯಾಹ್ನ 1 ಗಂಟೆಗೆ ವಿಜಯಪುರದಿಂದ ಬಾಗಲಕೋಟೆಗೆ ಪ್ರಯಾಣಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Share this