ಸಪ್ತಸಾಗರ ವಾರ್ತೆ ವಿಜಯಪುರ, ನ. 14: ಮಕ್ಕಳಿಗಾಗಿ ಆಸ್ತಿಯನ್ನು ಮಾಡಬೇಡಿ. ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ. ಮಕ್ಕಳೇ ಈ ಜಗತ್ತಿನ ಅಮೂಲ್ಯ ಸಂಪತ್ತು ಎಂದು ಸಾಹಿತಿ ಪ್ರೊ. ಎ.ಎಚ್. ಕೊಳಮಲಿ ಹೇಳಿದರು.
ಶುಕ್ರವಾರ ಕನಕ ಪಬ್ಲಿಕ್ ಶಾಲೆ ಹಾಗೂ ಕನಕ ನವೋದಯ ಕೋಚಿಂಗ್ ಸೆಂಟರ್ ನಲ್ಲಿ ಹಮ್ಮಿಕೊಂಡ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷ ಜಯಪ್ರಭು ಕೊಳಮಲಿ ಮಾತನಾಡಿ, ಮಕ್ಕಳ ಪಾಲನೆ ಪೋಷಣೆಯಲ್ಲಿ ಶಿಕ್ಷಕ, ತಂದೆ, ತಾಯಿಯ ಕರ್ತವ್ಯ ಬಹಳ ಮುಖ್ಯವಾಗಿದೆ. ಬಾಲ್ಯದಲ್ಲಿಯೇ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಕೊಟ್ಟಾಗ ಒಳ್ಳೆ ವ್ಯಕ್ತಿಯಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಸಂಸ್ಥೆಯ ನಿರ್ದೇಶಕ ರಾಮಸ್ವಾಮಿ ಕೊಳಮಲಿ ಮಾತನಾಡಿ, ಮಕ್ಕಳ ಮನಸ್ಸು ಹೂವಿನ ಹಾಗೆ ಮುದ್ದು ಸ್ವಭಾವ ಮಕ್ಕಳೇ ದೇವರು ಎಂದು ಹೇಳಿದರು.
ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಶಾಲಾ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಮಕ್ಕಳಿಗಾಗಿ ಆಸ್ತಿ ಮಾಡಬೇಡಿ: ಕೊಳಮಲಿ


