ಸಪ್ತಸಾಗರ ವಾರ್ತೆ ವಿಜಯಪುರ, ಆ. 28:
ಐತಿಹಾಸಿಕ ವಿಜಯಪುರ ಜಿಲ್ಲೆಗೆ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರ ಘೋಷಣೆ ಮಾಡಿದ್ದು ಸರಿಯಲ್ಲ. ಜಿಲ್ಲೆಗೆ ಸರ್ಕಾರಿ ಸ್ವಾಮಿದ ವಕೀ ಕಾಲೇಜ್ ಸ್ಥಾಪನೆ ಮಾಡಬೇಕು ಎಂದು ಸಕರಿ ಸಚಿವ ಶಿವಾನಂದ ಪಾಟೀಲ ಅವರು ಹೇಳಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಮೇಲಿನಂತೆ ಪ್ರತಿಕ್ರಿಯಿಸಿದರು.
ವಿಜಯಪುರ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ 150 ಎಕರೆ ಜಮೀನು ಲಭ್ಯವಿದೆ. ನಾನು ಆರೋಗ್ಯ ಸಚಿವನಾಗಿದ್ದ ಸಮಯದಲ್ಲಿ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ನರ್ಸಿಂಗ್ ಕಾಲೇಜ್ ಪ್ಯಾರಾ ಮೆಡಿಕಲ್ ಕಾಲೇಜ್ ಸ್ಥಾಪಿಸಲಾಗಿದೆ. ಸರಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ವಿಜಯಪುರ ಜಿಲ್ಲೆಯಲ್ಲಿ ಎಲ್ಲಾ ರೀತಿಯಿಂದಲೂ ಅನುಕೂಲವಿದೆ. ಹಾಗಾಗಿ ವಿಜಯಪುರ ಜಿಲ್ಲೆಗೆ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜ್ ಬೇಡ ಎಂದು ಸ್ಪಷ್ಟಪಡಿಸಿದರು.
ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜ್ ವಿಜಯಪುರಕ್ಕೆ ಬೇಡ ಎಂದು ಈಗಾಗಲೇ ಆರೋಗ್ಯ ಸಚಿವರು ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದವರು ಹೇಳಿದರು.
ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಸ್ಥಾಪನೆಯಿಂದ ಬಡ ರೋಗಿಗಳಿಗೆ ಶೋಷಣೆ ಮಾಡಿದಂತಾಗುತ್ತದೆ. ಅದಕ್ಕಾಗಿ ಸರ್ಕಾರ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಸ್ಥಾಪನೆ ನಿರ್ಧಾರ ಕೈ ಬಿಡಬೇಕು ಎಂದು ತಿಳಿಸಿದರು.
ವಿಜಯಪುರ ಜಿಲ್ಲೆಗೆ ಏಮ್ಸ್ ಕಾಲೇಜ್ ಬರಬೇಕು. ಈ ನಿಟ್ಟಿನಲ್ಲಿ ಸಂಸದ ರಮೇಶ ಜಿಗಜಿಣಗಿ ಅವರು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಬೇಕು ಎಂದರು.
ರಾಜ್ಯದ ಬಹುತೇಕ ಕಡೆ ಸರ್ಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜ್ ಸ್ಥಾಪನೆ ಮಾಡಲಾಗಿದೆ. ಆದರೆ ವಿಜಯಪುರದಲ್ಲಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲು ನಿರ್ಧರಿಸಿರುವುದು ನನಗೆ ತುಂಬಾ ನೋವನ್ನುಂಟು ಮಾಡಿದೆ ಎಂದು ಅವರು ತಿಳಿಸಿದರು.
ವಿಜಯಪುರಕ್ಕೆ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜ್ ಬೇಡ: ಸಚಿವ ಶಿವಾನಂದ ಪಾಟೀಲ
