ವಿಜಯಪುರ ಜಿಲ್ಲೆಯಲ್ಲಿ ಜೋಡಿ ಕೊಲೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 13:
ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಹಳೆಯ ವೈಷಮ್ಯ ಹಿನ್ನೆಲೆ ಬರ್ಬರವಾಗಿ ಕೊಲೆ ನಡೆದಿದೆ.
ಸಾಗರ ಬೆಳುಂಡಗಿ (25), ಇಸಾಕ್ ಖರೇಷಿ (24) ಕೊಲೆಗಿಡಾದ ವ್ಯಕ್ತಿಗಳು.
ಕಳೆದ ಎರಡು ವರ್ಷಗಳ ಹಿಂದೆ ಕೊಲೆಗೀಡಾದ ವ್ಯಕ್ತಿಗಳು ಅದೇ ಊರಿನ ಈರನಗೌಡ ಎಂಬಾತನ ಮೇಲೆ ಹಲ್ಲೆ ನಡೆಸಿದ್ದರು. ಈರನಗೌಡ ಆಸ್ಪತ್ರೆಯಲ್ಲಿ ಕೆಲದಿನ ದಾಖಲಾಗಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದ. ಈ ದ್ವೇಷದ ಕಾರಣ ಈ ಇಬ್ಬರ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಘಟನಾ ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Share this