ಸಪ್ತಸಾಗರ ವಾರ್ತೆ, ವಿಜಯಪುರ,ಜು.೯:
ವಿಜಯಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ. ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಕಳೆದ ಎರಡು ವರ್ಷಗಳಿಂದ ವಿಜಯಪುರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಟಿ. ಭೂಬಾಲನ್ ಅವರನ್ನು ಬೆಂಗಳೂರಿನ ಇ-ಆಡಳಿತ ಕೇಂದ್ರದ ಸಿಇಒ ಆಗಿ ಸರ್ಕಾರ ವರ್ಗಾವಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಮೊದಲಿನ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ನೂತನ ಜಿಲ್ಲಾಧಿಕಾರಿ ಡಾ. ಆನಂದ ಅವರಿಗೆ ಬುಧವಾರ ಅಧಿಕಾರ ಹಸ್ತಾಂತರಿಸಿದರು.
ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಡಾ. ಆನಂದ ಅವರು ಇದಕ್ಕೂ ಮುನ್ನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಜನರಲ್ ಮೆಡಿಸಿನ್ ವಿಭಾಗದಲ್ಲಿ ಎಂಬಿಬಿಎಸ್ ಹಾಗೂ ಎಂಡಿ ವೈದ್ಯಕೀಯ ಪದವಿ ಪಡೆದಿದ್ದಾರೆ. ಈ ಹಿಂದೆ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದಲ್ಲಿ ಸಹಾಯಕ ಕಾರ್ಯದರ್ಶಿಗಳಾಗಿ, ಗದಗ ಜಿಲ್ಲಾ ಮುಖ್ಯ ಕಾರ್ಯ ನಿರ್ವಣಾಧಿಕಾರಿಗಳಾಗಿದ್ದರು. ನಂತರ ಸಿಬ್ಬಂದಿ ಮತ್ತು ಆಡಳಿತ ಸುದಾರಣೆ ಇಲಾಖೆಯ ಉಪ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರೊಬೇಶನರಿ ಅಧಿಕಾರಿಗಳಾಗಿ ಹಾಗೂ ವಿಜಯಪುರ ಜಿಲ್ಲೆಯ ಇಂಡಿ ಉಪವಿಭಾಗಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.
8 ಜನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಸರ್ಕಾರ ಆದೇಶ ಹೊರಡಿಸಿದ್ದು, ಅವರಲ್ಲಿ ಡಾ. ಆನಂದ ಅವರು ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಡಾ. ಆನಂದ ಅವರು 2016ರ ಬ್ಯಾಚ್ ಐಎಎಸ್ ಅಧಿಕಾರಿಗಳಾಗಿದ್ದಾರೆ.
ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಅಧಿಕಾರ ಸ್ವೀಕಾರ
