ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 3: ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ಡಾ.ಗಂಗಾಧರ ಸಂಬಣ್ಣಿ ನೇಮಕಗೊಂಡಿದ್ದಾರೆ.
ಆಯುರ್ವೇದ ವೈದ್ಯಕೀಯ ಪದವೀಧರರಾಗಿರುವ ಸಂಬಣ್ಣಿ ವಿದ್ಯಾರ್ಥಿ ದೆಸೆಯಿಂದಲೇ ವಿದ್ಯಾರ್ಥಿ ಆಂದೋಲನ, ಹೋರಾಟದಲ್ಲಿ 1993-94ರಲ್ಲಿ ತೊಡಗಿಸಿಕೊಂಡಿದ್ದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರ ಘಟಕದ ಸಹ ಕಾರ್ಯದರ್ಶಿಯಾಗಿದ್ದ ಅವರು ನಂತರ ಯುವ ಮುಖಂಡರಾಗಿದ್ದ ಸುನೀಲಗೌಡ ಪಾಟೀಲರ ಗೆಳೆಯರಾಗಿ 1999ರಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು.
ಕಳೆದ 27 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿ ಸೇವೆ ಸಲ್ಲಿಸಿದ್ದ ಅವರು ಯುವ ಕಾಂಗ್ರೆಸ್ ಸಮಿತಿ ಜಿಲ್ಲಾ ಕಾಂಗ್ರೆಸ್ ಸೇವಾದಳದಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಸದ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿರುವ ಅವರನ್ನು ಪಕ್ಷದ ಸೇವೆಯನ್ನು ಗುರುತಿಸಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ನೇಮಕಗೊಳಿಸುವಂತೆ ಕಳೆದ ವಾರ ಬೆಂಗಳೂರಿನಲ್ಲಿ ಮುಖಂಡರಾದ ವಿಜಯಪುರ ವಿಧಾನಸಭೆ ಅಭ್ಯರ್ಥಿ ಅಬ್ದುಲಹಮೀದ ಮುಶ್ರಿಫ್, ಲೋಕಸಭಾ ಅಭ್ಯರ್ಥಿ ರಾಜು ಆಲಗೂರ, ಶಾಸಕ ವಿಠ್ಠಲ ಕಟಕದೊಂಡ ಮತ್ತು ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಚಿವ ಎಂ.ಬಿ.ಪಾಟೀಲ ಅವರ ನೇತೃತ್ವತದಲ್ಲಿ ಭೇಟಿ ಮಾಡಿ ವಿನಂತಿಸಿದ್ದರು.
ಡಾ.ಗಂಗಾಧರ ಸಂಬಣ್ಣಿ ಅವರ ನೇಮಕಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹರ್ಷವ್ಯಕ್ತಪಡಿಸಿದ್ದಾರೆ.
ವಿಡಿಎ ನೂತನ ಅಧ್ಯಕ್ಷರಾಗಿ ಡಾ. ಸಂಬಣ್ಣಿ ನೇಮಕ


