ವಿಡಿಎ ನೂತನ ಅಧ್ಯಕ್ಷರಾಗಿ ಡಾ. ಸಂಬಣ್ಣಿ ಅಧಿಕಾರ ಸ್ವೀಕಾರ

ಸಪ್ತಸಾಗರ ವಾರ್ತೆ ವಿಜಯಪುರ, ಫೆ. 6: ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಡಾ. ಗಂಗಾಧರ ಸಂಬಣ್ಣಿ ಅವರು ಶುಕ್ರವಾರ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಶಾಸಕ ವಿಠ್ಠಲ ಕಟಕದೊಂಡ, ಮಾಜಿ ಶಾಸಕ ರಾಜು ಆಲಗೂರ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮುಖಂಡರಾದ ಅಬ್ದುಲ ಹಮೀದ ಮುಶ್ರಿಫ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ. ಎಸ್. ಲೋಣಿ ವಿಡಿಎ ನಿಕಟಪೂರ್ವ ಅಧ್ಯಕ್ಷ ಕನ್ನಾನ್ ಮುಶ್ರಿಫ್, ಪ್ರಭುಗೌಡ ಲಿಂಗದಳ್ಳಿ, ಟಪಾಲ ಎಂಜಿನಿಯರ್, ಅಲ್ತಾಫ್ ಖಾದ್ರಿ ಸೋಮನಾಥ ಕಳ್ಳಿಮನಿ, ತಿಕೋಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡನವರ, ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದರು.

Share this