ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಈರಯ್ಯ ಹಾಗೂ ಜಿಲ್ಲಾ ಕಾರ್ಯದರ್ಶಿಯಾಗಿ ಸಾಯಬಣ್ಣನೇಮಕ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 24:
ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಈರಯ್ಯ ಹಿರೇಮಠ ಹಾಗೂ ಜಿಲ್ಲಾ ಕಾರ್ಯದರ್ಶಿಯಾಗಿ ಸಾಯಬಣ್ಣ ಹಳ್ಳಿ ನೇಮಕಗೊಂಡಿದ್ದಾರೆ.
ಕರ್ನಾಟಕ ರಾಜ್ಯ ಉಪಾಧ್ಯಕ್ಷ ಎನ್.ಸಿ. ಕಾಂಬಳೆ ಹಾಗೂ ರಾಜ್ಯ ಕಾರ್ಯದರ್ಶಿ ವಿನಾಯಕ ಸೊಂಡೂರ್ ಅವರ ಶಿಪಾರಸ್ಸು ಮೇರೆಗೆ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ರಮೇಶ ಬೇಕ್ರಿ ಅವರು ಈರಯ್ಯ ಶಾಂತಯ್ಯ ಹಿರೇಮಠರನ್ನು ಜಿಲ್ಲಾಧ್ಯಕ್ಷರನ್ನಾಗಿ ಹಾಗೂ ಸಾಯಬಣ್ಣ ಬಸಪ್ಪ ಹಳ್ಳಿ ಅವರನ್ನು ಜಿಲ್ಲಾ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Share this