ತಂದೆಯಿಂದಲೇ ಅಪ್ರಾಪ್ತ ಪುತ್ರಿಗೆ ಲೈಂಗಿಕ ಕಿರುಕುಳಕ್ಕೆ ಯತ್ನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 1:
ತಂದೆಯೊಬ್ಬ ತನ್ನ ಅಪ್ರಾಪ್ತ ಪುತ್ರಿಯ ಮೇಲೆಯೇ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ ಅಮಾನವೀಯ ಪ್ರಕರಣ ಜಿಲ್ಲೆಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದ್ದು, ಈ ಘಟನೆಯಿಂದ ಇಡೀ ಸಮಾಜ ತಲೆ ತಗ್ಗಿಸುವಂತಾಗಿದೆ.
ಐದು ವರ್ಷದ ಅಪ್ರಾಪ್ತ ಪುತ್ರಿಯ ಮೇಲೆಯೇ ತಂದೆಯೊಬ್ಬನು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆಂಬ ಪುತ್ರಿಯ ಬಾಯಿಂದ ಹೊರ ಬಿದ್ದ ಮಾತು ಕೇಳಿ ತಾಯಿಗೆ ಗರ ಸಿಡಿಲು ಬಡಿದಂತಾಯಿತು. ಕೆಲ ಹೊತ್ತು ವಿಚಲಿತಳಾದ ತಾಯಿ ವಿಜಯಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದಾಳೆ.
ಮಕ್ಕಳನ್ನು ಸಂರಕ್ಷಿಸುವ ಜವಾಬ್ದಾರಿ ತಂದೆ ತಾಯಿಗಳಿಬ್ಬರ ಮೇಲೆಯೂ ಇರುತ್ತದೆ. ಆದರೆ ಇಲ್ಲಿ ತಂದೆಯೇ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.
ಪೊಲೀಸರು ತಕ್ಷಣ ಫೋಕ್ಸೋ ಕಾಯ್ದೆ ಅಡಿ ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿ ತಂದೆಯನ್ನು ಬಂಧಿಸಿದ್ದಾರೆ. ಸದ್ಯ ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಅಲ್ಲಿ ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Share