ಸಪ್ತಸಾಗರ ವಾರ್ತೆ,ವಿಜಯಪುರ,ಜು. 30:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ- ಊಟ ಮತ್ತು ವಸತಿ ಸಹಾಯ ಯೋಜನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ವಿದ್ಯಾರ್ಥಿಗಳು https://ssp.postmatric.karnataka.gov.in ವೆಬ್‌ಸೈಟ್ ನಲ್ಲಿ ಸೆಪ್ಟೆಂಬರ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in ಹಾಗೂ 8050770005 ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶುಲ್ಕ ಮರುಪಾವತಿ ಯೋಜನೆ : ಅರ್ಜಿ ಆಹ್ವಾನ
