ಸಪ್ತಸಾಗರ ವಾರ್ತೆ ವಿಜಯಪುರ, ಸೆ. 9:
ಜಿಲ್ಲೆಯಾದ್ಯಂತ ಇರುವ ಶಾಲಾ-ಕಾಲೇಜ್ ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ತಂಬಾಕು ಉತ್ಪನ್ನಗಳ ಮಾರಾಟವಾಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ ನೀಡಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣಾ ಕಾರ್ಯಕ್ರಮದ 2025-26ನೇ ಸಾಲಿನ ಎರಡನೇ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಶಾಲೆಯ ಮುಖ್ಯೋಪಾಧ್ಯಾಯರು ಸೇರಿದಂತೆ ಶಾಲಾ ಅಭಿವೃದ್ಧಿ ಸಮಿತಿಯವರು ಕೊಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು, ಅರಿವುಮೂಡಿಸಬೇಕು. ತಂಬಾಕು ಉತ್ಪನ್ನಗಳ ಉಪಯೋಗದಿಂದ ದುಷ್ಪರಿಣಾಮ ಹಾಗೂ ಕಾಯ್ದೆಯ ಅರಿವು ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳ ನಿಯಂತ್ರಣಕ್ಕೆ ತನಿಖಾ ದಳಗಳನ್ನು ರಚಿಸಿಕೊಂಡು ಕ್ರೀಯಾಶೀಲತೆಯಿಂದ ಕಾಲ ಕಾಲಕ್ಕೆ ದಾಳಿ ನಡೆಸಬೇಕು.ಎಲ್ಲ ಶಾಲೆಗಳಲ್ಲಿ ಆಗಾಗ ಪಾಲಕರ ಸಭೆ ಜರುಗಿಸಿ,ಮಾಹಿತಿ ನೀಡಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸೂಕ್ತ ತಿಳುವಳಿಕೆ, ಅರಿವು ಮೂಡಿಸುವಂತೆ ಅವರು ಸೂಚಿಸಿದರು.
ಶಾಲಾ ಶಿಕ್ಷಣ ಸಂಸ್ಥೆಗಳು ತಂಬಾಕು ಮುಕ್ತ ಶಿಕ್ಷಣ ಸಂಸ್ಥೆಯ ಮಾರ್ಗಸೂಚಿಗಳನ್ನು ದಾಖಲಿಸಬೇಕು. ಕೋಟ್ಪಾ ಕಾಯ್ದೆಯನ್ನು ಉಲ್ಲಂಘಿಸುವ ಅಂಗಡಿಗಳ ಮಾಲೀಕರಿಗೆ ಒಂದು ಬಾರಿ ದಂಡ ವಿಧಿಸಿ,ಸೂಕ್ತ ತಿಳುವಳಿಕೆ ನೀಡಿ,ಇದು ಪುನರಾವರ್ತಿವಾಗಿರುವುದು ಕಂಡು ಬಂದರೆ ವ್ಯಾಪಾರದ ಲೈಸೆನ್ಸ್‍ನ್ನು ರದ್ಧುಪಡಿಸಲು ಗ್ರಾಮ ಪಂಚಾಯತಿ ಹಾಗೂನಗರ ಸ್ಥಳೀಯ ಸಂಸ್ಥೆಗಳು ಕ್ರಮವಹಿಸಬೇಕು.ಪ್ರತಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೋಟ್ಪಾ ಕಾಯ್ದೆಯ ಸೆಕ್ಸೆನ-4 ಹಾಗೂ ಸೆಕ್ಸೆನ್-6ಬಿ ರನ್ವಯ ನಾಮಫಲಕದ ಗೋಡೆ ಬರಹ ಬರೆಸಬೇಕು. ನಾಮಫಲಕವನ್ನು ಶಾಲಾ,ಕಾಲೇಜಿನ ಪ್ರಮುಖ ಸ್ಥಳದಲ್ಲಿ ಹಾಗೂ ಪ್ರವೇಶ ದ್ವಾರದಲ್ಲಿ ಅಳವಡಿಸಬೇಕು.ಶಾಲಾ ಕಾಲೇಜುನಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚಿಸಿಕೊಂಡು ನಿಯಮಗಳ ಕಟ್ಟು ನಿಟ್ಟಿನ ಅನುಷ್ಠಾನವಾಗುವಂತೆ ನೋಡಿಕೊಳ್ಳಬೇಕು. ಕೋಟ್ಪಾ ಕಾಯ್ದೆಯ ಮಾಹಿತಿ ಶಾಲಾ ಕಾಲೇಜಿನಲ್ಲಿ ಲಭ್ಯವಿರಬೇಕು.ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿಗಳು ಕೊಟ್ಪಾ ಕಾಯ್ದೆಯನ್ವಯ ನಾಮಫಲಕ ಅಳವಡಿಸಿರುವುದನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ತಂಡ ರಚಿಸಿಕೊಂಡು ಆಗಾಗ ದಾಳಿ ಮಾಡಿ,ಪರಿಶೀಲನೆ ನಡೆಸಬೇಕು ಎಂದು ಅವರು ಹೇಳಿದರು.
ತಂತ್ರಾಂಶದಲ್ಲಿ 3325ರ ಶಿಕ್ಷಣ ಸಂಸ್ಥೆಗಳ ಪೈಕಿ 1353 ದಾಖಲಾಗಿದ್ದು, ಬಾಕಿ ಇರುವ 1972 ಸಂಸ್ಥೆಗಳ ಹಾಗೂ 253 ಪದವಿಪೂರ್ವ ಶಿಕ್ಷಣ ಇಲಾಖೆ ಸಂಸ್ಥೆಗಳ ಬಾಕಿ ಇರುವ 50 ಸಂಸ್ಥೆಗಳ ದಾಖಲೀಕರಣ ಮುಂದಿನ ಸಭೆಯೊಳಗೆ ಕಡ್ಡಾಯವಾಗಿ ಮಾರ್ಗಸೂಚಿಯಂತೆ ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆ ಘೋಷಿಸಿ,ಜಿಲ್ಲಾ ತಂಬಾಕು ನಿಯಂತ್ರಣ ಕೋಶಕ್ಕೆ ವರದಿ ನೀಡುವಂತೆ ಅವರು ಸೂಚನೆ ನೀಡಿದರು.ಜಿಲ್ಲಾ ಮಟ್ಟದಲ್ಲಿ ನಡೆಯುವ ಸಭೆಯು ಪ್ರತಿ ತಿಂಗಳೂ ಪ್ರಗತಿ ಪರಿಶೀಲನೆ ಮಾಡಲಾಗುವುದು. ತಹಶೀಲ್ದಾರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ತಾಲೂಕಾ ತನಿಖಾ ತಂಡ ನಿಯಮಿತವಾಗಿ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆ ನಡೆಸಬೇಕು. ಅಬಕಾರಿ ಇಲಾಖೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶಕ್ಕೆ ಅಗತ್ಯ ಸಹಕಾರ ಒದಗಿಸಬೇಕು ಎಂದು ಅವರು ಹೇಳಿದರು.
ಅಂತರ್ ಇಲಾಖೆಯ ಸಮನ್ವಯದೊಂದಿಗೆ ಎಲ್ಲ ಗ್ರಾಮಗಳಲ್ಲಿ ಗ್ರಾಮ ಮಟ್ಟದ ತಂಬಾಕು ನಿಯಂತ್ರಣ ಸಮಿತಿ ರಚಿಸಿಕೊಳ್ಳುವುದು. ಸ್ಥಳೀಯ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ತಾಲೂಕಕಾವಾರು ಗ್ರಾಮಗಳನ್ನು ಆಯ್ದುಕೊಂಡು ವಿವಿಧ ಅರಿವು-ಜಾಗೃತಿ ಚಟುವಟಿಕೆ,ಸಭೆ ಹಮ್ಮಿಕೊಳ್ಳಬೇಕು. ಮೂಡಿಸಬೇಕು.ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನಗಳ ಬಳಕೆಯಾಗದಂತೆ ಕ್ರಮವಹಿಸಬೇಕು ಎಂದು ಅವರು ಹೇಳಿದರು.
ಗ್ರಾಮ ಮಟ್ಟದಲ್ಲಿ ಪಂಚಾಯತಿ ಅಧ್ಯಕ್ಷರ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಶಾಲಾ ಶಿಕ್ಷಕರು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಸಮುದಾಯ ಆರೋಗ್ಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಸ್ವಸಹಾಯ ಸಂಘ, ಯುವಕ ಸಂಘದ ಅಧ್ಯಕ್ಷರು, ಪ್ರತಿನಿಧಿಗಳು ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳನ್ನೊಳಗೊಂಡ ಗ್ರಾಮ ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸಿಕೊಂಡು ತಂಬಾಕು ಸೇವೆನಯಿಂದಾಗುವ ದುಷ್ಪರಿಣಾಮಗಳ ಹಾಗೂ ಲಭ್ಯವಿರುವ ಆರೋಗ್ಯ ಮಾಹಿತಿ ಒದಗಿಸುವುದು. ಒಟ್ಟಾರ, ಕೊಟ್ಪಾ-2003ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಅವರು ಸೂಚನೆ ನೀಡಿದರು.
ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲೆಗೆ ಸರಬರಾಜಾಗುವ ಕುಡಿಯುವ ನೀರಿನ ಮೂಲದಲ್ಲಿಯೇ ಪರೀಕ್ಷೆ ನಡೆಸಿದ ಮಾಹಿತಿಯನ್ನು ಗ್ರಾಮೀಣ ಭಾಗದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಿಗೆ ಸಲ್ಲಿಸಿ ಅಗತ್ಯ ಕ್ರಮ ವಹಿಸಬೇಕು. ಈ ಕಾರ್ಯದಲ್ಲಿ ಯಾವುದೇ ನಿರ್ಲಕ್ಷ್ಯ ತೋರದೆ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಗ್ರಾಮೀಣ ಭಾಗದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಪೂರೈಸುವ ಮುನ್ನ ಅವಶ್ಯಕತೆವಿದ್ದೆಡೆ ಕ್ಲೋರಿನೇಶನ್‍ಗೆ ಕ್ರಮ ವಹಿಸಬೇಕು. ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನರಲ್ಲಿ ಸೂಕ್ತ ತಿಳುವಳಿಕೆ ಮೂಡಿಸಬೇಕು. ನಾಯಿ ಕಡಿತ, ಹಾವು ಕಡಿತ ಸೇರಿದಂತೆ ಅಗತ್ಯ ಔಷಧಿಗಳನ್ನು ದಾಸ್ತಾನಿಟ್ಟುಕೊಳ್ಳಬೇಕು. ಬೀದಿ ನಾಯಿಗಳಿಗೆ ಆಯಾ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ರೋಗ ಪ್ರತಿಬಂಧಕ ಲಸಿಕೆಗೆ ಕ್ರಮ ವಹಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ,ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ್ ಸೌದಾಗರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಿವಿ ಕುಂಬಾರ, ಶಿಕ್ಷಣ ಇಲಾಖೆಯ ಜಿಲ್ಲಾ ಉಪ ಸಮನ್ವಾಯಾಧಿಕಾರಿ ಟಿ.ಎಚ್.ಕೋಲಾರ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿ ಅಪ್ಪಾಸಾಹೇಬ ಇನಾಂದಾರ, ಬಸವನಬಾಗೇವಾಡಿ ತಾಲೂಕಾ ಆರೋಗ್ಯ ಅಧಿಕಾರಿ ಡಾ.ಕವಿತಾ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕೋಟ್ಪಾಕಾಯ್ದೆಪರಿಣಾಮಕಾರಿಅನುಷ್ಠಾನಕ್ಕೆಜಿಲ್ಲಾಧಿಕಾರಿಡಾ. ಆನಂದ.ಕೆಸೂಚನೆ


