ಗಣೇಶ ಉತ್ಸವ ನಿಮಿತ್ತ ಉಚಿತ ಆರೋಗ್ಯ ತಪಾಸಣೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 29:
ನಗರದ ಶ್ರೀ ಶಂಕರಲಿಂಗ ಗಜಾನನ ತರುಣ ಮಂಡಳಿ, “ಸಂಕಲ್ಪ ಸಿದ್ಧಿ’ ಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ನಿಮಿತ್ತ ದೇವಸ್ಥಾನದ ಆವರಣದಲ್ಲಿ ಉಚಿತ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿತ್ತು.
ವಿಜಯಪುರ ಮಹಾನಗರ ಪಾಲಿಕೆಯ ಸದಸ್ಯ ಶಿವರುದ್ರ ಬಾಗಲಕೋಟ ಅವರ ನೇತೃತ್ವದಲ್ಲಿ ಉಚಿತ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣಾ ಶಿಬಿರವನ್ನು ನಡೆಯಿತು.
ಶಿಬಿರದಲ್ಲಿ ಖ್ಯಾತ ಮಧುಮೇಹ ತಜ್ಞ ವೈದ್ಯ ಡಾ. ಬಾಬುರಾಜೇಂದ್ರ ನಾಯಕ ಮತ್ತಿತರರಿಂದ ನೂರಾರು ಜನರ ಆರೋಗ್ಯ ತಪಾಸಣೆ ಮಾಡಲಾಯಿತು. ಮಂಡಳಿಯ ಅಧ್ಯಕ್ಷ ಆಶೀಶ ಹುಣಶ್ಯಾಳ, ದೇವಸ್ಥಾನದ ಅಧ್ಯಕ್ಷ ವಿರುಪಾಕ್ಷಪ್ಪ ಶಾಬಾದಿ, ಹಿರಿಯರಾದ ಸೂರಪ್ಪ ಮಿರ್ಜಿ, ಶಂಕರ ಹೇರಲಗಿ ಮುಂತಾದವರು ಉಪಸ್ಥಿತರಿದ್ದರು.

Share