ಸಪ್ತಸಾಗರ ವಾರ್ತೆ, ವಿಜಯಪುರ, ಅ. 30 : ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಅಕ್ಟೋಬರ್ 31 ರಂದು ಶುಕ್ರವಾರ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ.
ಈ ಶಿಬಿರದಲ್ಲಿ ನಾನಾ ರೀತಿಯ ನರ ರೋಗಗಳು, ಸಂಧಿನೋವು, ಬೆನ್ನು ನೋವು, ಮಂಡಿ ನೋವು, ಭುಜ ನೋವು, ಕುತ್ತಿಗೆ ನೋವು, ಹಿಮ್ಮಡಿ ನೋವು ಹಾಗೂ ಸಂಧಿಯಲ್ಲಿ ಬಾವು ಬರುವುದು ಸೇರಿದಂತೆ ನಾನಾ ಹೀಗೆ ರೋಗಗಳಿಗೆ ಉಚಿತ ತಪಾಸಣೆ ನಡೆಸಲಾಗುವುದು.
ಚಿಕಿತ್ಸೆ ಅಗತ್ಯವಿರುವ ಸಾರ್ವಜನಿಕರು ಈ ಉಚಿತ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾಲೇಜಿನ ಪ್ರಾಚಾರ್ಯ ಡಾ ಅಶೋಕ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ- 9513397413 ಮತ್ತು 7483278348 ಸಂಪರ್ಕಿಸಬಹುದಾಗಿದೆ.
ನಾಳೆ ಉಚಿತ ಆರೋಗ್ಯ ತಪಾಸಣೆ ಶಿಬಿರ


