ಗಾಂಧಿ ಜಯಂತಿ: ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 29:
ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಅಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿತ ದಿನವೆಂದು ಸರ್ಕಾರ ಘೋಷಿಸಿದೆ.
ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ವಿಜಯಪುರ ಮಹಾನಗರಪಾಲಿಕೆಯ ಆರೋಗ್ಯಾಧಿಕಾರಿಗಳು ಪ್ರಟಕಣೆಯಲ್ಲಿ ತಿಳಿಸಿದ್ದಾರೆ.

Share this