ಸಿಕ್ಯಾಬ್ ಗೆ ಚಿನ್ನದ ಪದಕ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 3: ನಗರದ ಸಿಕ್ಯಾಬ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) 2025ನೇ ಸಾಲಿನ ಎಂ.ಟೆಕ್ (ಮಷಿನ್ ಡಿಸೈನ್) ಪರೀಕ್ಷೆಯಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಅವರ ಉಪಸ್ಥಿತಿಯಲ್ಲಿ ಈ ರ‍್ಯಾಂಕಗಳನ್ನು ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಯಿತು.
ಪ್ರಶಾಂತ ಕೋಟೆಪ್ಪಗೊಳ ಮತ್ತು ಚೈತ್ರಾ ಮಡಿವಾಳಕರ ಅವರು ಯುನಿವರ್ಸಿಟಿ ಚಿನ್ನದ ಪದಕದೊಂದಿಗೆ ರ‍್ಯಾಂಕ್ ಪಡೆದು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಗಳಿಸಿದ್ದಾರೆ. ಅವರ ಈ ಸಾಧನೆ ಕಾಲೇಜಿಗೆ ಅಪಾರ ಹೆಮ್ಮೆ ತಂದಿದೆ.
ಈ ಎಲ್ಲ ಸಾಧನೆಗಾಗಿ ಸಿಕ್ಯಾಬ್ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಚಾರ್ಯರು, ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ವರ್ಗವು ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರನ್ನು ಅಭಿನಂದಿಸಿ ಹರ್ಷವ್ಯಕ್ತಪಡಿಸಿದ್ದಾರೆ.

Share this