ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು: ಹೋರಾಟಗಾರರ ಮೇಲಿನ ಪ್ರಕರಣ ರದ್ದುಗೊಳಿಸಿ- ಎನ್. ರವಿಕುಮಾರ್ ಒತ್ತಾಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಜ. 3: ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜುಸ್ಥಾಪನೆಗೆ ಒತ್ತಾಯಿಸಿ ಕಳೆದ 107 ದಿನಗಳಿಂದ ಪ್ರತಿಭಟಿಸುತ್ತಿದ್ದ ಹೋರಾಟಗಾರರ ಮೇಲೆ FIR ದಾಖಲಿಸಿರುವುದು ಹಾಗೂ ರಾತ್ರೋರಾತ್ರಿ ಪ್ರತಿಭಟನಾ ಸ್ಥಳದ ಪೆಂಡಾಲ್ ತೆಗೆದಿರುವದು ಖಂಡನೀಯ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕೆ ಹೇಳಿಕೆ ನೀಡಿರುವ ಅವರು, ಇದು ಪ್ರಜಾಪ್ರಭುತ್ವ ವಿರೋಧಿ, ಇದು ಪ್ರತಿಭಟನೆಯನ್ನು ಹತ್ತಿಕ್ಕುವ ಸರಕಾರ ಎಂದು ಟೀಕಿಸಿದ್ದಾರೆ.
ಈ ರಾಜ್ಯದಲ್ಲಿ ನ್ಯಾಯಕ್ಕಾಗಿ ಯಾರೂ ಕೂಡ ಪ್ರತಿಭಟನೆ ಮಾಡಬಾರದು. ಮಾಡಿದರೆ ಈ ಸರ್ಕಾರ ಅವರನ್ನು ಟಾರ್ಗೆಟ್ ಮಾಡಿ ಅವರ ಮೇಲೆ FIR ದಾಖಲಿಸಿ, ಬಂಧಿಸುತ್ತಿರುವುದು ಸರಿಯಲ್ಲ ಎಂದರು.
ಈ ಕಾಂಗ್ರೇಸ್ ಸರಕಾರ ಬಂದಾಗಿನಿಂದ ಪ್ರತಿಭಟನೆಯನ್ನು ಹತ್ತಿಕ್ಕುತ್ತಿದೆ. ಇದು ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಬಗ್ಗೆ ಕೂಡಲೇ ಸರಕಾರ ಸ್ಪಂದಿಸಬೇಕು.
ಪ್ರತಿಭಟನಾ ನಿರತ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಬೇಕು. ಅವರ ಮೇಲಿನ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದರು.

Share this