ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 4:
ಭೀಮಾತೀರದ 6 ಜನರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ ಪ್ರಮುಖ ಆರೋಪಿ ಸೇರಿ 6 ಜನರನ್ನು ಫೊಲೀಸರು ಬಂಧಿಸಿದ್ದಾರೆ.
ಪ್ರಮುಖ ಆರೋಪಿ ಅಪ್ಪುಗೌಡ ಪಾಟೀಲ ಸೇರಿದಂತೆ 6 ಜನರನ್ನು ವಶಕ್ಕೆ ಪಡೆಯಲಾಗಿದೆ.
ಕಳೆದ ಮೇ 29 ರಂದು ಗೋವಿಂದಪುರದಲ್ಲಿ ಜಮೀನು ವಿವಾದ ಹಿನ್ನೆಲೆ ನಡೆದಿದ್ದ ಭೀಕರ ಹತ್ಯಾಕಾಂಡದಲ್ಲಿ ಚಂದ್ರಕಾಂತ ನಿರಾಳೆ, ಆತನ ಮಕ್ಕಳಾದ ಸಮರ್ಥ ಹಾಗೂ ರಾಹುಲ್, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ ಹಾಗೂ ಶಬ್ಬಿರ್ ಅತ್ತಾರ ಅವರು ಭೀಕರವಾಗಿ ಕೊಲೆಯಾಗಿದ್ದರು
ಜೂನ್ 1 ರಂದು ಪ್ರಮುಖ ಆರೋಪಿ ಕಲ್ಲನಗೌಡ ಪಾಟೀಲ ಸೇರಿ 11 ಆರೋಪಿಗಳನ್ನು ಬಂಧಿಸಲಾಗಿತ್ತು.
ತನಿಖೆ ವೇಳೆ ಇನ್ನಷ್ಟು ಆರೋಪಿಗಳ ಪಾತ್ರ ಬೆಳಕಿಗೆ ಬಂದ ಹಿನ್ನೆಲೆ ಇಂದು 6 ಜನರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳ ವೈದ್ಯಕೀಯ ಪರೀಕ್ಷೆ ಬಳಿಕ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಕಗ್ಗೊಲೆ ಪ್ರಕರಣದಲ್ಲಿ ಇದುವರೆಗೆ ಒಟ್ಟು 17 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.
ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಗೋವಿಂದಪುರ ಹತ್ಯಾಕಾಂಡ: ಮತ್ತೆ ಆರು ಜನರ ಬಂಧನ


