ಸಪ್ತಸಾಗರ ವಾರ್ತೆ,ವಿಜಯಪುರ, ಏ. 16: ಆಯುರ್ವೇದದಲ್ಲಿ ಸಂಶೋಧನೆಗೆ ಹೆಚ್ಚೆಚ್ಚು ಸಂಶೋಧನೆ ಕೈಗೊಳ್ಳುವ ಮೂಲಕ ಆರೋಗ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಲು ಸಾಧ್ಯ ಎಂದು ನವದೆಹಲಿ ಎನ್.ಸಿ.ಐ.ಎಸ್.ಎಂ ಬೋರ್ಡ್ ಆಫ್ ಆಯುರ್ವೇದ ಅಧ್ಯಕ್ಷ ಡಾ. ಅಲ್ಲಮಪ್ರಭು ಗುಡ್ಡಾ ಹೇಳಿದ್ದಾರೆ.
ಶನಿವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನದ ಕೇಂದ್ರದ ವತಿಯಿಂದ ಬೆಂಗಳೂರು ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ವಚನ ಪಿತಾಮಹ ಡಾ. ಪಿ.ಜಿ. ಹಳಕಟ್ಟಿ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾದ ರಾಷ್ಟ್ರಮಟ್ಟದ ಒಂದು ದಿನದ ವಿಚಾರ ಸಂಕಿರಣ ಅನುಸಂಧಾನ-11 ಉದ್ಘಾಟಿಸಿ ಅವರು ಮಾತನಾಡಿದರು.
ಆಯುರ್ವೇದ ವಿದ್ಯಾರ್ಥಿಗಕಳು ಸಂಶೋಧನೆಗೆ ಹೆಚ್ಚು ಒತ್ತು ನೀಡಬೇಕು. ಈ ಮೂಲಕ ಜನರಿಗೆ ಆಯುರ್ವೇದ ಚಿಕಿತ್ಸೆಯ ಹೆಚ್ಚೆಚ್ಚು ಲಾಭ ದೊರೆಯುವಂತೆ ಮಾಡಬೇಕು ಎಂದು ಅವರು ಹೇಳಿದರು.
ಬೆಳಗಾವಿ ಕೆ.ಎಲ್.ಇ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ. ಸುಹಾಸಕುಮಾರ ಶೆಟ್ಟಿ, ಪುಣೆಯ ಭಾರತೀಯ ವಿದ್ಯಾಪೀಠದ ಪ್ರಾಚಾರ್ಯ ಡಾ. ಶೈಲೇಶ ದೇಶಪಾಂಡೆ, ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಸಂಖ್ಯಾಶಾಸ್ತ್ರಜ್ಞ ಡಾ. ಅಜಯಕುಮಾರ ರಂಗೋಲಿ ಅವರು ನಾನಾ ವಿಷಯಗಳ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ನವದೆಹಲಿ ಬೋರ್ಡ ಆಫ್ ಆಯುರ್ವೇದ ಎನ್.ಸಿ.ಐ.ಎಸ್.ಎಂ ಮಾಜಿ ಅಧ್ಯಕ್ಷ ಬೆಳಗಾವಿ ಕೆ.ಎಲ್.ಇ ಮಾಜಿ ಅಧ್ಯಕ್ಷ ಡಾ. ಬಿ. ಶ್ರೀನಿವಾಸ ಪ್ರಸಾದ, ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ, ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸಂಜಯ ಕಡ್ಲಿಮಟ್ಟಿ, ಉಪಪ್ರಾಚಾರ್ಯ ಡಾ. ಶಶಿಧರ ನಾಯಕ, ವೈದ್ಯರಾದ ಡಾ. ಪ್ರಮೋದ ಸಿ. ಬರಗಿ, ಡಾ.ಸತೀಶ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
ಈ ವಿಚಾರ ಸಂಕಿರಣದಲ್ಲಿ ದೇಶದ ನಾನಾ ರಾಜ್ಯಗಳ 400ಕ್ಕೂ ಹೆಚ್ಚು ಸ್ನಾತಕೋತ್ತರ ವೈದ್ಯಕೀಯ, ಯುನಾನಿ, ನರ್ಸಿಂಗ, ಫಾರ್ಮಸಿ ಸಂಶೋಧನೆ ವಿದ್ಯಾರ್ಥಿಗಳು ಪಾಲ್ಗೊಂಡರು.
ಆಯುರ್ವೇದದಲ್ಲಿ ಸಂಶೋಧನೆಗೆ ಹೆಚ್ಚೆಚ್ಚು ಸಂಶೋಧನೆ ಕೈಗೊಳ್ಳುವ ಮೂಲಕ ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ ನುಡಬೇಕು- ಡಾ. ಗುಡ್ಡಾ


