ಸಪ್ತಸಾಗರ ವಾರ್ತೆ ವಿಜಯಪುರ, ಸೆ. 15:
ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷದಿಂದ ಗರ್ಭಿಣಿ ಮಹಿಳೆಯೊಬ್ಬಳಿಗೆ ಜಿಲ್ಲಾ ಆಸ್ಪತ್ರೆ ಆವರಣದಲ್ಲೇ ಹೆರಿಗೆ ಆಗಿರುವ ಘಟನೆ ನಡೆದಿದೆ.
ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದ ಕಾವೇರಿ ಎಂಬುವರು ಆಸ್ಪತ್ರೆ ಆವರಣದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ.
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳದಿಂದ ವಿಜಯಪುರ ಜಿಲ್ಲಾಸ್ಪತ್ರೆ ಆವರಣಕ್ಕೆ ಗರ್ಭಿಣಿಯನ್ನು ಕರೆ ತಂದರೂ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗದೆ ಹೊರ ಆವರಣದಲ್ಲಿಯೇ ಹೆರಿಗೆ ಆಗಿದೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಜಿಲ್ಲಾ ಆಸ್ಪತ್ರೆ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡು ಸಕಲ ಸೌಲಭ್ಯವನ್ನು ಹೊಂದಿದ್ದರೂ ಗರ್ಭಿಣಿ ಮಹಿಳೆ ಆಸ್ಪತ್ರೆ ಒಳಗಡೆ ಹೆರಿಗೆಯಾಗದೆ ಆವರಣದಲ್ಲಿ ಮಗುವಿಗೆ ಜನ್ಮ ನೀಡಿರುವುದು ಆಸ್ಪತ್ರೆ ಸಿಬ್ಬಂದಿಯ ದಿವ್ಯ ನಿರ್ಲಕ್ಷ್ಯ ಜನರು ಹಿಡಿ ಶಾಪ ಹಾಕುವಂತಾಗಿದೆ.
ಇದೇ ವೇಳೆ ಇಂಥ ಆಸ್ಪತ್ರೆ ಇದ್ದರೆಷ್ಟು ಹೋದರೆಷ್ಟು ಎಂದು ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಈ ಬಗ್ಗೆ ಜಿಲ್ಲಾ ಸರ್ಜನ್ ಅವರು, ಕೆಲವೊಂದು ಸಂದರ್ಭದಲ್ಲಿ ಇಂತಹ ಘಟನೆಗಳು ನಡೆಯುತ್ತವೆ. ಈಗ ತಾಯಿ, ಮಗು ಆರೋಗ್ಯವಾಗಿದ್ದಾರೆಂದು ತಿಳಿಸಿದರು.
ಇನ್ನಾದರೂ ವಿಜಯಪುರ ಜಿಲ್ಲಾ ಆಸ್ಪತ್ರೆ ಜನಸ್ನೇಹಿ ಆಸ್ಪತ್ರೆಯಾಗಿ ಕೆಲಸ ಮಾಡಲಿ ಎಂದು ಜನರು ಒತ್ತಾಯಿಸಿದ್ದಾರೆ.
ಆಸ್ಪತ್ರೆ ಸಿಬ್ಬಂದಿ ದಿವ್ಯ ನಿರ್ಲಕ್ಷ್ಯ: ಆಸ್ಪತ್ರೆ ಆವರಣದಲ್ಲಿಯೇ ಗರ್ಭಿಣಿ ಹೆರಿಗೆ
