ಸಪ್ತಸಾಗರ ವಾರ್ತೆ, ವಿಜಯಪುರ, ಏ. 14:
ದುಷ್ಕರ್ಮಿಗಳು ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಿದ ದುರ್ಘಟನೆ ನಗರ ಹೊರ ವಲಯದ ಅಲಿಯಾಬಾದ ಬಳಿ ನಡೆದಿದೆ.
ಗ್ರಾ.ಪಂ ಸದಸ್ಯ ರಾಜು ಕುರಿ ಎಂಬುವರು ಗುಂಡೇಟಿಗೆ ಬಲಿಯಾಗಿದ್ದಾರೆ.
ದುಷ್ಕರ್ಮಿಗಳು ರಾಜುನ ಮೇಲೆ 6 ಸುತ್ತು ಗುಂಡು ಹಾರಿಸಿ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಹಳೆಯ ವೈಷಮ್ಯ ಹತ್ಯೆಗೆ ಕಾರಣ ಇರಬಹುದು ಎಂದು ಶಂಕಿಸಲಾಗಿದೆ
ಪಾಂಗರುನ ದೊಡ್ಡಿ ನಿವಾಸಿಯಾಗಿದ್ದ ರಾಜು ಕುರಿಯು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು


