ಬಸ್- ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ: ಇಬ್ಬರು ಬೈಕ್ ಸವಾರರ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಡಿ. 25:
ಸಾರಿಗೆ ಬಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ
ಜಿಲ್ಲೆಯ ನಿಡಗುಂದಿ ತಾಲೂಕಿನ ಮುದ್ದಾಪುರ ಕ್ರಾಸ್ ಬಳಿ ಗುರುವಾರ ಸಂಭವಿಸಿದೆ.
ಮುದ್ದೇಬಿಹಾಳ ತಾಲೂಕಿನ ಕೊಪ್ಪ ತಾಂಡಾದ ಶಿವಪ್ಪ ರಾಮಪ್ಪ ಲಮಾಣಿ (60) ಹಾಗೂ ಬಸರಕೋಡ ಗ್ರಾಮದ ಬಸಪ್ಪ ಸಂಗಪ್ಪ ಸೂಳಿಬಾವಿ (67) ಎಂದು ಮೃತಪಟ್ಟ ದುರ್ದೈವಿಗಳು.
ಮುದ್ದೇಬಿಹಾಳದಿಂದ ಬಾಗಲಕೋಟೆ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ಹಾಗೂ ನಿಡಗುಂದಿಯಿಂದ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದ ತಕ್ಷಣ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ನಿಡಗುಂದಿ ಸಿಪಿಐ ಶರಣಗೌಡ ಗೌಡರ ಹಾಗೂ ಪಿಎಸ್‌ಐ ಶಿವಾನಂದ ಪಾಟೀಲ ಅವರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this