ಸಪ್ತಸಾಗರ ವಾರ್ತೆ, ವಿಜಯಪುರ, ಜು. 26:
ಛಾಯಾಗ್ರಾಹಕರ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿದೆ ಎಂದು ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ಼್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.
ಶನಿವಾರ ನಗರದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘ ಜಿಲ್ಲಾ ಘಟಕ ಆಯೋಜಿಸಿದ್ದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಹಾಗೂ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ತಂತ್ರಜ್ಞಾನ ಯುಗದಲ್ಲಿ ಛಾಯಾಗ್ರಾಹಕರಿಗೂ ಅನೇಕ ಸವಾಲುಗಳಿದ್ದು, ಆರ್ಟಿಫಿಶಿಯಲ್ ಇಂಟಲಿಜನ್ಸ್ ಮತ್ತು ಡಿಜಿಟಲ್ ತಂತ್ರಜ್ಞಾನಕ್ಕೆ ಬದಲಾವಣೆಗೆ ತಕ್ಕಂತೆ ವೃತ್ತಿಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕು. ಹಿಂದಿನ ದಿನಗಳಲ್ಲಿ ನಮ್ಮ ಹಿರಿಯ ಛಾಯಾಗ್ರಾಹಕರಿಗೆ ಹೋಲಿಸಿದರೆ ಇಂದಿನ ತಂತ್ರಜ್ಞಾನ ಅನುಕೂಲವಾಗಿದೆ. ಛಾಯಾಗ್ರಾಹಕರ ಬೇಡಿಕೆಯಾದ ಫೋಟೋಗ್ರಾಫರ್ಸ್ ಅಕಾಡೆಮಿ ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಡಿಸಿಎಂ ಕೆ. ಎಸ್. ಈಶ್ವರಪ್ಪ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಛಾಯಾಗ್ರಾಹಕರ ಸಂಘದ ರಾಜ್ಯಾಧ್ಯಕ್ಷ ಎಚ್. ಎಸ್. ನಾಗೇಶ, ಜಿಲ್ಲಾಧ್ಯಕ್ಷ ರಮೇಶ ಚವ್ಹಾಣ ಮುಂತಾದವರು ಉಪಸ್ಥಿತರಿದ್ದರು.
ಫೋಟೋಗ್ರಾಫರ್ಸ್ ಅಕಾಡೆಮಿ ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ: ಸಚಿವ ಎಂ.ಬಿ. ಪಾಟೀಲ


