ಸಪ್ತಸಾಗರ ವಾರ್ತೆ,ವಿಜಯಪುರ, ಅ. 23:
ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಸಾಧಕರಿಗೆ ನವೆಂಬರ್ 1ರಂದು ಸನ್ಮಾನ ಮಾಡಲು ಉದ್ದೇಶಿಸಲಾಗಿದೆ.
ಕಲೆ, ಸಾಹಿತ್ಯ, ರಂಗಭೂಮಿ, ಸುಗಮ ಸಂಗೀತ, ಜನಪದ, ಸಂಗೀತ, ಶಿಲ್ಪಕಲೆ, ನೃತ್ಯ, ಚಿತ್ರಕಲೆ, ಸಮಾಜ ಸೇವೆ, ಕೃಷಿ, ವೈದ್ಯಕೀಯ, ಪತ್ರಿಕೋದ್ಯಮ, ಸಂಕೀರ್ಣ, ಇತರೆ ಕ್ಷೇತ್ರಗಳಲ್ಲಿ ತಮ್ಮ ಸಾಧನೆಯ ವಿವರಗಳನ್ನು ಒಳಗೊಂಡಂತೆ ತಮ್ಮ ಸ್ವ-ಪರಿಚಯ ಮತ್ತು ದಾಖಲೆಗಳೊಂದಿಗೆ ಅ. 27 ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ, ಸ್ಟೇಶನ್ ರಸ್ತೆ ವಿಜಯಪುರ ಕಚೇರಿಗೆ ಸಲ್ಲಿಸಬಹುದಾಗಿದೆ.
ಈ ಕುರಿಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ: 08352-251261 ಸಂಖ್ಯೆಗೆ ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


