ಸಪ್ತಸಾಗರ ವಾರ್ತೆ,ವಿಜಯಪುರ, ಏ. 16: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದದಲ್ಲಿ ಅಧಿಕ ರಕ್ತದೊತ್ತಡ (High blood pressure) ತಲೆನೋವು, ತಲೆ ತಿರುಗುವಿಕೆ, ಹೃದಯವು ವೇಗವಾಗಿ ಬಡಿದುಕೊಳ್ಳುವ ಕುರಿತು ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಏಪ್ರಿಲ್ 20 ರಿಂದ ಏಪ್ರಿಲ್ 25ರ ವರೆಗೆ ನಡೆಯಲಿದೆ.
ಬಿ.ಎಲ್.ಡಿ.ಇ ಆಯುರ್ವೇದ ಆಸ್ಪತ್ರೆಯಲ್ಲಿ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಆರು ದಿನಗಳ ಕಾಲ ಆಯೋಜಿಸಲಾಗಿರುವ ಈ ಶಿಬಿರದಲ್ಲಿ ಮೇಲಿನ ಸಮಸ್ಯೆಗಳನ್ನು ಎದುರಿಸುತ್ತಿರುವ 18 ರಿಂದ 79 ವರ್ಷದವರೆಗಿನ ಸಾರ್ವಜನಿಕರು ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಎಂದು ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ- 9513397413 ಸಂಪರ್ಕಿಸಬಹುದಾಗಿದೆ.
Editor
Rudrappa B Asangi
Editor
Managing Editor
Chetan Asangi
Managing Editor


