ತಿಕೋಟದಲ್ಲಿ ಸೆ. 21 ರಿಂದ ಮೂರು ದಿನಗಳ ಕಾಲ ದ್ರಾಕ್ಷಿ ಬೆಳೆ ವಿಚಾರ ಸಂಕಿರಣ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 18 :
ಸೆ. 21ರಿಂದ ಮೂರು ದಿನಗಳ ಕಾಲ
ಜಿಲ್ಲೆಯ ತಿಕೋಟಾದ ಕನಕದಾಸ ಭವನದಲ್ಲಿ ರಾಜ್ಯಮಟ್ಟದ ದ್ರಾಕ್ಷಿ ವಿಚಾರ ಸಂಕಿರಣ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಪ್ರಾದೇಶಿಕ ಸಂಘದ ಅಧ್ಯಕ್ಷ ಅಭಯಕುಮಾರ ನಾಂದ್ರೇಕರ ತಿಳಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ದ್ರಾಕ್ಷಿ ಬೆಳೆಗಾರರು ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ಅನೇಕ ತೆರನಾದ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳ ನಿವಾರಣೆಗೆ ಪರಿಹಾರೋಪಾಯಗಳನ್ನು ಕಂಡುಕೊಳ್ಳಬೇಕಾಗಿರುವುದು ಅಗತ್ಯವಾಗಿದೆ, ಈ ನಿಟ್ಟಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಸಮಗ್ರ ಚಿಂತನ-ಮಂಥನ ನಡೆಸಲಾಗುವುದು. ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಪ್ರಾದೇಶಿಕ ಕಛೇರಿ ವಿಜಯಪೂರ ಹಾಗೂ ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಸಹಯೋಗದಲ್ಲಿ ಈ ಕಾರ್ಯಾಗಾರ ಆಯೋಜಿಸಲಾಗಿದೆ, ದ್ರಾಕ್ಷಿ ಬೆಳೆಗಾರರು ಕಾರ್ಯಾಗಾರದ ಸದುಪಯೊಗ ಪಡೆದುಕೊಂಡು ವಿಜ್ಞಾನಿಗಳು ನೀಡಿದಂತಹ ಮಾರ್ಗದರ್ಶನಗಳನ್ನು ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಮತ್ತು ಲಾಭ ಪಡೆದುಕೊಳ್ಳಬೇಕು. ಈಗಾಗಲೇ ವಿಚಾರ ಸಂಕಿರಣಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಈ ವಿಚಾರ ಸಂಕಿರಣಕ್ಕೆ ತೋಟಗಾರಿಕಾ ಸಚಿವ ಮಲ್ಲಿಕಾರ್ಜುನ ಚಾಲನೆ ನೀಡಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅಧ್ಯಕ್ಷತೆ ವಹಿಸಲಿದ್ದು, ಸಕ್ಕರೆ-ಎಪಿಎಂಸಿ ಸಚಿವ ಶಿವಾನಂದ ಪಾಟೀಲ,ಮಾಜಿ ಉಪ ಮುಖ್ಯಮಂತ್ರಿ ಲಕ್ಷಣ ಸವದಿ, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಸಿ.ಎಸ್.ನಾಡಗೌಡ, ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕದೊಂಡ, ಭೀಮನಗೌಡ (ರಾಜುಗೌಡ) ಪಾಟೀಲ, ಅಶೋಕ ಮನಗೂಳಿ, ವಿಧಾನಪರಿಷತ್ ಸದಸ್ಯರಾದ ಸುನೀಲಗೌಡ ಪಾಟೀಲ, ಮಾಜಿ ಶಾಸಕ ಆನಂದ ನ್ಯಾಮಗೌಡ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಸೇರಿದಂತೆ ವಿವಿಧ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ವಿವಿಧ ರಾಜ್ಯಗಳಿಂದ ವಿಜ್ಞಾನಿಗಳ ದಂಡು

ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ನುರಿತ ವಿಜ್ಞಾನಿಗಳು ಭಾಗವಹಿಸಲಿದ್ದು, ಡಾ.ಸಿದ್ದಣ್ಣ ರೋಕ

Share this