ಸಪ್ತಸಾಗರ ವಾರ್ತೆ, ವಿಜಯಪುರ,ಡಿ.19 :
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ 102 ನೂತನ ನಗರ ಸಾರಿಗೆ ವಾಹನಗಳ ಲೋಕಾರ್ಪಣೆ ಸಮಾರಂಭವು ಡಿ.20ರಂದು ನಗರದ ದರಬಾರ ಶಾಲೆಯ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10:30ಕ್ಕೆ ನಡೆಯುವ ಸಮಾರಂಭದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರು ಲೋಕಾರ್ಪಣೆಗೊಳಿಸುವರು. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಘನ ಉಪಸ್ಥಿತರಿರಲಿದ್ದಾರೆ. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಅದ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ.ಎನ್, ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-2 ಹಾಗೂ ಶಾಸಕರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸಾಬೂನು ಮತು ಮಾರ್ಜಕ ನಿಯಮಿತದ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ ಎಸ್ ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ ಡಾ. ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಹನಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ ಕಟಕದೊಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ಕೇಶವ ಪ್ರಸಾದ ಎಸ್, ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಡಾ. ಅರುಣಕುಮಾರ ಎಂ.ವೈ. ಪಾಟೀಲ, ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಬಿ.ಎಸ್.ಕವಲಗಿ, ಮಹಾನಗರ ಪಾಲಿಕೆ ಮಹಾಪೌರ ಎಂ.ಎಸ್.ಕರಡಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನಾನ್ ಮುಶ್ರೀಫ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಇಲಿಯಾಸ್ ಬೋರಾಮಣಿ ಅವರು ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇ-ಆಡಳಿತದ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್ ಕುಮಾರ್ ಘೋಷ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ ಕೆ.ಬಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ಬೆಳಗಾವಿ ಪ್ರಾದೇಶಿಕ ಆಯುಕ್ತ ಜಾನಕಿ ಕೆ.ಎಂ, ಕಲಬುರಗಿಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಾ. ಸುಶೀಲಾ ಬಿ, ಜಿಲ್ಲಾಧಿಕಾರಿ ಡಾ. ಆನಂದ.ಕೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


