ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26:
ಕರ್ನಾಟಕ ರಾಜ್ಯ ಸರಕಾರಿ ಎಸ್.ಸಿ., ಎಸ್.ಟಿ. ನೌಕರರ ಸಮನ್ವಯ ಸಮಿತಿ (ರಿ) ಜಿಲ್ಲಾ ಶಾಖೆ ವಿಜಯಪುರ ಕಚೇರಿ ಉದ್ಘಾಟನಾ ಹಾಗೂ ಸಮಾಜ ಪರಿವರ್ತನೆಯಲ್ಲಿ ನೌಕರರ ಪಾತ್ರ ಕುರಿತು ವಿಚಾರ ಸಂಕಿರಣ ಡಿ. 28ರಂದು ಬೆಳಿಗ್ಗೆ 11-30 ಗಂಟೆಗೆ ಸ್ಟೇಶನ್ ರಸ್ತೆ ಅಂಬೇಡ್ಕರ್ ಸರ್ಕಲ್ ಹತ್ತಿರ ಇರುವ ಡಾ. ಬಾಬಾಸಾಹೇಬ ಅಂಬೇಡ್ಕರ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.
ಮಾಜಿ ಶಾಸಕ ರಾಜು ಆಲಗೂರ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಕಚೇರಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಕ.ರಾ.ಸ.ಎಸ್.ಸಿ.,ಎಸ್.ಟಿ. ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ. ಶಿವಶಂಕರ, ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ವಿಜಯಕುಮಾರ, ರಾಜ್ಯ ಉಪಾಧ್ಯಕ್ಷರು ಆರ್. ಮೋಹನ, ಜಲಮಂಡಳಿ ಕಾರ್ಯಪಾಲಕ ಅಭಿಯಂತರರು ಗೋವಿಂದ ಎಸ್., ಉಮಾ ಸೊನ್ನದ, ಸುನೀಲ ಉಕ್ಕಲಿ, ಡಾ. ಅಶೋಕ ಗೊಣಸಗಿ ಭಾಗವಹಿಸಲಿದ್ದಾರೆ ಎಂದು ಕ.ರಾ.ಸ.ಎಸ್.ಸಿ.,ಎಸ್.ಟಿ. ನೌಕರರ ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ ಬಿ.ಎಚ್. ನಾಡಗಿರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


