ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ: ಅವಧಿ ವಿಸ್ತರಣೆ

ಸಪ್ತಸಾಗರ ವಾರ್ತೆ, ವಿಜಯಪುರ,ಜ. 3 : 2025-26ನೇ ಸಾಲಿನಲ್ಲಿ ಬಿ.ಎಡ್ ಕೋರ್ಸಿನ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 15ರವರೆಗ ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು ಅರ್ಜಿಯನ್ನು ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ, ಅಗತ್ಯ ದಾಖಲಾತಿಗಳೊಂದಿಗೆ ಹಾರ್ಡ್ ಪ್ರತಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಚೇರಿ ದೂರವಾಣಿ : 083552_295523 ಹಾಗೂ ವಿಜಯಪುರ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕಚೇರಿ ಮೊ.8123710766 ತಾಲೂಕು ಬಸವನ ಬಾಗೇವಾಡಿ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೊ. 9972340721, ಮುದ್ದೇಬಿಹಾಳ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೊ.8722445552, ಸಿಃದಗಿ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ. 9035558609 ಈ ಕೇಂದ್ರಗಳಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share this