ಸಪ್ತಸಾಗರ ವಾರ್ತೆ, ವಿಜಯಪುರ, ಆ. 15: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ 79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಇಂದು ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಯೋಧರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಬ್ರಿಟಿಷ್ ಆಳ್ವಿಕೆಯಿಂದ ಭಾರತವನ್ನು ಮುಕ್ತಗೊಳಿಸಲು ಹೋರಾಡಿದ ಮಹಾನ್ ನಾಯಕರ ತ್ಯಾಗ ಮತ್ತು ಬಲಿದಾನದ ಫಲವಾಗಿ ನಾವು ಇಂದು ಸ್ವತಂತ್ರ ಭಾರತದಲ್ಲಿ ಬದುಕುತ್ತಿದ್ದೇವೆ. ಈ ದಿನದಂದು ಅವರ ತ್ಯಾಗವನ್ನು ಸ್ಮರಿಸುವ ಜೊತೆಗೆ ಭ್ರಷ್ಟಾಚಾರ, ಬಡತನ, ನಿರುದ್ಯೋಗ ಮುಂತಾದ ಸಮಸ್ಯೆಗಳನ್ನು ಹೋಗಲಾಡಿಸಲು ಸಂಕಲ್ಪ ಮಾಡಬೇಕು ಎಂದು ಹೇಳಿದರು.
ಇದೇ ವೇಳೆ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸ್ನಾತಕೋತ್ತರ ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಬೋಧಕ ವರ್ಗದ ಸಿಬ್ಬಂದಿಗಳಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ವಿವಿ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ಪರೀಕ್ಷೆ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ಪ್ರಾಚಾರ್ಯ, ಡಾ. ಅರವಿಂದ ಪಾಟೀಲ, ವೈದ್ಯಕೀಯ ನಿರ್ದೇಶಕ, ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ವೈದ್ಯಕೀಯ ಅಧೀಕ್ಷಕ, ಡಾ. ಆರ್. ಎಂ. ಹೊನ್ನುಟಗಿ, ವೈದ್ಯಕೀಯ ವಿಭಾಗದ ಡೀನ ಡಾ. ತೇಜಸ್ವಿನಿ ವಲ್ಲಭ, ಅಲೈಡ ಹೆಲ್ತ ಸಾಯಿನ್ಸ್ ಡೀನ್ ಡಾ. ಎಸ್. ವಿ. ಪಾಟೀಲ, ಸ್ಟುಡೆಂಟ್ಸ್ ಅಫೆರ‍್ಸ ಡೀನ್ ಡಾ. ಆನಂದ ಅಂಬಲಿ, ಆರ್ ಮತ್ತು ಡಿ. ವಿಭಾಗದ ನಿರ್ದೇಶಕ ಡಾ. ಎಂ. ಎಂ. ಪಾಟೀಲ, ಹಣಕಾಸು ಅಧಿಕಾರಿ, ಬಿ. ಎಸ್. ಪಾಟೀಲ, ಉಪಕುಲಸಚಿವ, ಸತೀಶ ಪಾಟೀಲ, ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿ ಉಪಸ್ಥಿತರಿದ್ದರು.
ಬಿಎಲ್ ಡಿಇ ಡೀಮ್ಡ್ ವಿವಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ
